No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ನಿರೀಕ್ಷೆ | ಸಂಸದ ರಾಘವೇಂದ್ರ ಹೇಳಿದ್ದೇನು?

kalpa News by kalpa News
June 15, 2026
in ಶಿವಮೊಗ್ಗ
1
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಅಥವಾ ಮುಂದುವರಿಸುವ ವಿಚಾರ ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ರಾಜ್ಯಾಧ್ಯಕ್ಷರಾದ ನಂತರ ಅವರ ನೇತೃತ್ವದಲ್ಲಿ ಹಲವು ಹೋರಾಟಗಳು ಹಾಗೂ ಪಾದಯಾತ್ರೆಗಳು ನಡೆದಿದ್ದು, ಪಕ್ಷ ಸಂಘಟನೆ ಬಲಪಡಿಸಲಾಗಿದೆ ಎಂದು ಹೇಳಿದರು. “ಅವರನ್ನೇ ಮುಂದುವರಿಸಿದರೂ ತಪ್ಪೇನಿಲ್ಲ” ಎಂದು ಅವರು ಅಭಿಪ್ರಾಯಪಟ್ಟರು.
ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಕುರಿತು ಹೈಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದ ಅವರು, ಪಕ್ಷದಿಂದ ಉಚ್ಚಾಟಿತರಾದ ನಾಯಕರನ್ನು ಮರು ಸೇರ್ಪಡೆ ಮಾಡುವ ವಿಚಾರದಲ್ಲಿ ಅವರ ನಡವಳಿಕೆಯನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

ಇದೇ ವೇಳೆ, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಯನ್ನು ಉಲ್ಲೇಖಿಸಿದ ರಾಘವೇಂದ್ರ, ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಕೆಲವು ನ್ಯೂನತೆಗಳು ಕಂಡುಬಂದಿದ್ದು, ಮರು ಅರ್ಜಿ ಆಹ್ವಾನಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಹೇಳಿದರು.

Also read: ಕೋರ್ಸ್ ಆಯ್ಕೆ ಒತ್ತಡದಿಂದಲ್ಲ, ತಿಳುವಳಿಕೆಯಿಂದ ಆಗಲಿ | ವಿಜಯಕುಮಾರ್

ಕಳೆದ ಮೂರುವರೆ ವರ್ಷಗಳಲ್ಲಿ ದಾಖಲೆಗಳಿಲ್ಲದೆ ಮೃತಪಟ್ಟ ಸುಮಾರು 1.25 ಲಕ್ಷ ಮಹಿಳೆಯರ ಹೆಸರಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ದುರುಪಯೋಗವಾಗಿರುವ ಸಾಧ್ಯತೆಗಳಿದ್ದು, ಇದರ ಬಗ್ಗೆ ತನಿಖೆ ನಡೆಸುವ ಅಗತ್ಯವಿದೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಬೇಕೆಂಬ ಉದ್ದೇಶ ಇದ್ದರೂ, ಪ್ರಸ್ತುತ ಶೇ. 20ರಿಂದ 25ರಷ್ಟು ಜನರಿಗೆ ಮಾತ್ರ ಇದರ ಪ್ರಯೋಜನ ಸಿಗುತ್ತಿದೆ. ಯುವನಿಧಿ ಯೋಜನೆಯೂ ಕೇವಲ ಶೇ. 20ರಿಂದ 22ರಷ್ಟು ಪದವೀಧರರಿಗೆ ಮಾತ್ರ ತಲುಪಿದೆ ಎಂದು ಅವರು ಹೇಳಿದರು. ಈ ಹಿನ್ನೆಲೆಯಲ್ಲಿ ಯೋಜನೆಗಳ ಮರುಪರಿಶೀಲನೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಭ್ರಷ್ಟಾಚಾರದ ವಿರುದ್ಧ ಸರ್ಕಾರ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸಬೇಕಿದ್ದು, ಕೇವಲ ಹೇಳಿಕೆಗಳಲ್ಲದೆ ಕಟ್ಟುನಿಟ್ಟಿನ ಕ್ರಮ ಜಾರಿಗೆ ಬರಬೇಕು ಎಂದು ಒತ್ತಾಯಿಸಿದರು. ಶಿವಮೊಗ್ಗದ ಎಸ್‌ಡಿಎ ಅಧಿಕಾರಿಯ ಆತ್ಮಹತ್ಯೆ ಘಟನೆಗೂ ಅವರು ಉಲ್ಲೇಖ ಮಾಡಿದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನಲ್ಲಿ ರಾಜ್ಯದ ಆರ್ಥಿಕ ಕೊರತೆ ರಾಜ್ಯದ ಸ್ವಂತ ಯೋಜನೆಗಳಿಂದ ಉಂಟಾಗಿದೆ ಎಂದು ಹೇಳಿರುವುದನ್ನೂ ಅವರು ಪ್ರಸ್ತಾಪಿಸಿದರು.

ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ರಿಸಾರ್ಟ್ ರಾಜಕೀಯ ಮತ್ತು ಕ್ರಾಸ್ ವೋಟಿಂಗ್ ಭೀತಿ ಎದುರಾಗಿರುವುದರಿಂದ ಶಾಸಕರಲ್ಲಿ ವಿಶ್ವಾಸ ನಿರ್ಮಾಣ ಅಗತ್ಯವಿದೆ ಎಂದು ಹೇಳಿದರು.

ಇನ್ನೊಂದೆಡೆ, ರಾಜ್ಯದಲ್ಲಿ ಯೂರಿಯಾ ಗೊಬ್ಬರದ ಕೊರತೆ ಉಂಟಾಗಿ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಕೇಂದ್ರ ಸರ್ಕಾರವು ಪ್ರತಿವರ್ಷ 3 ಲಕ್ಷ ಕೋಟಿ ರೂ. ಸಬ್ಸಿಡಿ ನೀಡುತ್ತಿದ್ದರೂ, ಕೃತಕ ಅಭಾವ ಸೃಷ್ಟಿಯಾಗುತ್ತಿರುವ ಬಗ್ಗೆ ಅನುಮಾನವಿದೆ. ಯೂರಿಯಾವನ್ನು ಕೈಗಾರಿಕೆಗಳಿಗೆ ಬಳಸುತ್ತಿರುವುದರಿಂದ ಕಾಳಸಂತೆಯಲ್ಲಿ ದುರುಪಯೋಗವಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ರಾಘವೇಂದ್ರ ಆಗ್ರಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: BJP High CommandBJP State PresidentKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMP RaghavendraNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share204Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋರ್ಸ್ ಆಯ್ಕೆ ಒತ್ತಡದಿಂದಲ್ಲ, ತಿಳುವಳಿಕೆಯಿಂದ ಆಗಲಿ | ವಿಜಯಕುಮಾರ್

Next Post

ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಎಂಡೋಸ್ಕೋಪಿ, ಕೀಮೋಥೆರಪಿ ಡೇ-ಕೇರ್ ಸೇವೆಗಳಿಗೆ ಚಾಲನೆ

kalpa News

kalpa News

Next Post
Narayana Super Specialty Clinic Shivamogga

ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಎಂಡೋಸ್ಕೋಪಿ, ಕೀಮೋಥೆರಪಿ ಡೇ-ಕೇರ್ ಸೇವೆಗಳಿಗೆ ಚಾಲನೆ

Comments 1

  1. Pingback: ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಎಂಡೋಸ್ಕೋಪಿ, ಕೀಮೋಥೆರಪಿ ಡೇ-ಕೇರ್ ಸೇವೆಗಳಿಗೆ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL