ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬೀದಿಬದಿ ವ್ಯಾಪಾರಿಗಳಿಗಾಗಿ ವಿಶೇಷವಾಗಿ ಕನ್ಸರ್ವೆನ್ಸಿ ರಸ್ತೆಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿ, ವ್ಯಾಪಾರಕ್ಕೆ ಸೂಕ್ತ ಸ್ಥಳ ಮಾಡುವ ಬಗ್ಗೆ ಯೋಜನೆ ರೂಪಿಸಿ, ಅನುಷ್ಠಾನಕ್ಕೆ ತರಲಾಗುವುದು ಎಂದ ಶಾಸಕ ಚನ್ನಬಸಪ್ಪ #MLA Channabasappa ತಿಳಿಸಿದರು.
ಶಾಸಕರ ಕಚೇರಿಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ಮಾಯಣ್ಣ ಗೌಡ ಹಾಗೂ ಬೀದಿಬದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿ ನಗರ ವ್ಯವಸ್ಥಿತತೆಯ ಸಮತೋಲನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಕನ್ಸರ್ವೆನ್ಸಿ ರಸ್ತೆಗಳ ಅಭಿವೃದ್ಧಿ ಹಾಗೂ ಪುನರ್ ಸ್ಥಳಾಂತರ ಯೋಜನೆ
ಬೀದಿಬದಿ ವ್ಯಾಪಾರಿಗಳಿಗಾಗಿ ವಿಶೇಷವಾಗಿ ಕನ್ಸರ್ವೆನ್ಸಿ ರಸ್ತೆಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿ, ವ್ಯಾಪಾರಕ್ಕೆ ಸೂಕ್ತ ಸ್ಥಳ ಮಾಡುವ ಬಗ್ಗೆ ಯೋಜನೆ ರೂಪಿಸಿ, ಅನುಷ್ಠಾನಕ್ಕೆ ತರಲಾಗುವುದು.
ರಾಜ್ಯ ಸರ್ಕಾರದ ಪುನರ್ವಸತಿ ಯೋಜನೆಯಡಿ ಸೌಲಭ್ಯಗಳ ಕಲ್ಪನೆ
ಸರ್ಕಾರದ ‘Town Vending Committee’ ಮಾರ್ಗಸೂಚಿಯಂತೆ ಅವರಿಗೆ ವ್ಯಾಪಾರಕ್ಕೆ ಸ್ಥಳ ನಿಗದಿ, ಕೈಗಾರಿಕಾ, ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ವಿದ್ಯುತ್ ಹಾಗೂ ಶೌಚಾಲಯ ವ್ಯವಸ್ಥೆ ಕಲ್ಪಿಸುವ ಕುರಿತು ಚರ್ಚೆ ನಡೆಸಿದರು.
ಆಲ್ಕೋಳ ವೃತ್ತ ವ್ಯಾಪಾರಿಗಳಿಗೆ ಪರ್ಯಾಯ ಜಾಗ
ಆಲ್ಕೋಳ ವೃತ್ತದ ವ್ಯಾಪಾರ ಚಟುವಟಿಕೆಗಳು ನಿತ್ಯ ಸಂಚಾರಕ್ಕೆ ಅಡಚಣೆ ತರುತ್ತಿರುವ ಹಿನ್ನೆಲೆಯಲ್ಲಿ, ಅಲ್ಲಿನ ಬೀದಿಬದಿ ವ್ಯಾಪಾರಿಗಳಿಗೆ ಸಮರ್ಪಕ ಪರ್ಯಾಯ ವ್ಯಾಪಾರ ಸ್ಥಳ ಒದಗಿಸುವ ಕುರಿತಂತೆ ಸ್ಥಳ ಪರಿಶೀಲನೆ ನಡೆಸಿ ಶೀಘ್ರ ನಿರ್ಧಾರ ಕೈಗೊಳ್ಳಲು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಐಡಿ ಕಾರ್ಡ್‌ಗಳ ವಿತರಣೆ
ಪಾಲಿಕೆಯ ವ್ಯಾಪ್ತಿಯಲ್ಲಿ ವ್ಯಾಪಾರ ನಡೆಸುತ್ತಿರುವ ಎಲ್ಲಾ ಬೀದಿಬದಿ ವ್ಯಾಪಾರಿಗಳಿಗೆ ಮಾನ್ಯತೆ ಹಾಗೂ ದಾಖಲಾತಿಗಾಗಿ ಪ್ರಾಮಾಣಿಕತೆ ಅನ್ವಯಿಸಿ ಐಡಿ ಕಾರ್ಡ್ ವಿತರಣೆ ಮಾಡುವ ಬಗ್ಗೆ ಚರ್ಚೆ ನಡೆಸಿದರು.
ಈ ಸಭೆಯಲ್ಲಿ ಮಹಾನಗರ ಪಾಲಿಕೆಯ ಹಲವು ಅಧಿಕಾರಿಗಳು, ಪಾಲಿಕೆ ಆಯುಕ್ತರ ತಂಡ, ಬೀದಿಬದಿ ವ್ಯಾಪಾರಿಗಳ ಸಂಘದ ಪ್ರಮುಖ ಪದಾಧಿಕಾರಿಗಳು ಹಾಗೂ ಸ್ಥಳೀಯ ಪ್ರಮುಖರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post