ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗೃಹ ಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ದಿನೇ ದಿನೇ ಗಾಂಜಾ ಡ್ರಗ್ಸ್ ಮಾದಕ ವಸ್ತುಗಳ ಕುರಿತಂತೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಜಿಲ್ಲೆಯಲ್ಲಿ ಗಾಂಜಾ ಮಾದಕ ವಸ್ತುಗಳ ಮಾರಾಟ ನಿರಂತರವಾಗಿ ಸಾಗಿದೆ ಗಾಂಜಾ ಡ್ರಗ್ಸ್ ಹಾವಳಿ ನಿಯಂತ್ರಿಸುವಲ್ಲಿ ವಿಫಲರಾಗಿರುವ ಹಾಗೂ ಇಲಾಖೆಯನ್ನು ಸಮರ್ಥಕವಾಗಿ ನಿರ್ವಹಿಸುವಲ್ಲಿ ವಿಫಲರಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ವಜಗೊಳಿಸಬೇಕು ಎಂದು ಎನ್ ಎಸ್ ಯು ಐ ಜಿಲ್ಲಾ ಘಟಕ ಆಗ್ರಹಿಸಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಇತ್ತೀಚಿಗೆ ಬಹುತೇಕ ಕಾಲೇಜಿನ ವಿದ್ಯಾರ್ಥಿಗಳು ಗಾಂಜಾ ಮಾದಕ ವಸ್ತುಗಳ ವ್ಯಸನಕ್ಕೆ ತುತ್ತಾಗುತ್ತಿದ್ದಾರೆ ಶಾಲಾ-ಕಾಲೇಜುಗಳ ಆವರಣದಲ್ಲಿ ಗಾಂಜಾ ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿದೆ ಇತ್ತೀಚಿಗೆ ಪ್ರತಿಷ್ಠಿತ ಕಾಲೇಜುಗಳ ಎದುರಿನಲ್ಲಿಯೇ ವಿದ್ಯಾರ್ಥಿಗಳು ನಶೆಯಲ್ಲಿ ಬಿದ್ದು ಒದ್ದಾಡುತ್ತಿರುವುದು ವೈರಲ್ ಆಗಿತ್ತು. ಇದು ಅತ್ಯಂತ ಬೇಸರದ ಸಂಗತಿ. ಗಾಂಜಾ ಡ್ರಗ್ಸ್ ಸೇರಿದಂತೆ ಮಾದಕ ವಸ್ತುಗಳ ಮಾರಾಟ ತಡೆಗಟ್ಟಲು ಪೊಲೀಸ್ ಇಲಾಖೆ ಶಿವಮೊಗ್ಗ ಜಿಲ್ಲೆಯಲ್ಲಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳಬೇಕು. ಗಾಂಜಾ ಮಾರಾಟ ಹಾಗೂ ಬಳಕೆ ಮಾಡುವವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಂಡು ಶಿಕ್ಷೆಗೆ ಒಳಪಡಿಸಬೇಕು. ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಕೆಲಸವನ್ನು ರಾಜ್ಯ ಸರ್ಕಾರ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದೆ.
ರಾಜ್ಯದಲ್ಲಿ ಗಾಂಜಾ ಮಾರಾಟ ಮಾದಕ ವಸ್ತುಗಳ ಮಾರಾಟ ನಿಯಂತ್ರಿಸುವಲ್ಲಿ ಗೃಹ ಇಲಾಖೆ ನಿರ್ವಹಿಸುವಲ್ಲಿ ವಿಫಲರಾಗಿರುವ ಸಚಿವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ NSUI ಜಿಲ್ಲಾಧ್ಯಕ್ಷ ವಿಜಯ, ಜಿಲ್ಲಾ ಕಾರ್ಯಾಧ್ಯಕ್ಷ ರವಿ ಕಾಟಿಕೆರೆ, ನಗರ ಅಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರೋಜಿ ರಾವ್, ರವಿ, ಆಕಾಶ್, ಸೋನು ,ತೋಫಿಕ್, ಪ್ರದೀಪ್, ಕುಮಾರ್, ಸೂರಜ್ ಕಿರಣ್, ಗಿರೀಶ್, ವಿಶಾಲ್, ಕಿರಣ್, ಸಚಿನ್, ಗಗನ್, ಅಭಿ, ಪವನ್, ಮುರುಳಿ, ಮನು ಹಾಗೂ ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಮುಹಮ್ಮದ್ ನಿಹಾಲ್, ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್, ಯುವ ಮುಖಂಡ ಮಧುಸೂದನ್, ಯುವ ಕಾಂಗ್ರೆಸ್ ನ ಮಲವಗೊಪ್ಪ ಶಿವು, ಅಬ್ದುಲ್, ಮಲಿಕ್ ನಾಯ್ಕ್ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post