ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಬಿಜೆಪಿ ಪಕ್ಷದಲ್ಲಿರುವ ಆಂತರಿಕ ವೈಮನಸ್ಸಿನಿಂದಲೇ ರಾಜ್ಯ ಸರ್ಕಾರ ಬಿದ್ದು ಹೊಗಲಿದೆ. ಹಾಗೂ ಮುಂಬರುವ ಆರು ತಿಂಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು 6 ತಿಂಗಳಲ್ಲಿ ಸರ್ಕಾರ ಪತನವಾಗಲಿದೆ. ಬಿಜೆಪಿಯವರಿಗೆ ಸಾರ್ವಜನಿಕರ ಬಗ್ಗೆ ಕಾಳಜಿ ಇಲ್ಲ. ಅವರು ಧನ ಸಂಪಾದನೆಗಾಗಿ ಅಧಿಕಾರದಲ್ಲಿ ಇದ್ದಾರೆ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಪೆಟ್ರೋಲ್ ದರ 100 ರೂ. ದಾಟಿದೆ. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದೆ. ಜನರು ಬಿಜೆಪಿ ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ಈ ಬಿಜೆಪಿಯವರಿಗೆ ಆಡಳಿತ ನಡೆಸಲು ಅನುಭವದ ಕೊರತೆ ಇದೆ ಎಂದರು.
ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಪತನವಾಗಲಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಶಾಸಕ ಬಿ.ಕೆ.ಸಂಗಮೇಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post