ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಸೇವೆಯಲ್ಲಿ ಸಾರ್ಥಕತೆ ಕಾಣುತ್ತಿರುವ ಜಿಲ್ಲೆಯ ಪ್ರಖ್ಯಾತ ವೈದ್ಯ ಡಾ.ಶಿವರಾಮಕೃಷ್ಣ ಅವರು ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಕಿಡಿಗೇಡಿಗಳ ವಿರುದ್ಧ ಸಿಇಎನ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಡಾ.ಶಿವರಾಮಕೃಷ್ಣ ಅವರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ವಾಟ್ಸಪ್ ಹಾಗೂ ಫೇಸ್’ಬುಕ್’ನಲ್ಲಿ ದುಷ್ಕರ್ಮಿಗಳು ಹರಿಬಿಟ್ಟಿದ್ದರು. ಆದರೆ, ಈ ಹಿರಿಯ ವೈದ್ಯರು ಆರೋಗ್ಯವಾಗಿದ್ದು, ಎಂದಿನಂತೆ ರೋಗಿಗಳ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ.
ಅಲ್ಲದೇ ಈ ಕುರಿತಂತೆ ಸ್ವತಃ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದು, ಈ ಸುದ್ದಿ ಸಂಪೂರ್ಣ ಸುಳ್ಳಾಗಿದ್ದು, ಇದನ್ನು ಯಾರೂ ನಂಬಬೇಡಿ ಎಂದು ಮಾಧ್ಯಮಗಳ ಮೂಲಕ ಮನವಿ ಮಾಡಿಕೊಳ್ಳುವ ಸ್ಥಿತಿ ಬಂದಿದೆ ಎಂದಿದ್ದಾರೆ.
ನನ್ನ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರಿದಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ದೇವರ ಅನುಗ್ರಹ ಹಾಗೂ ನಿಮ್ಮೆಲ್ಲರ ಹಾರೈಕೆಯಿಂದ ನಾನು ಆರೋಗ್ಯವಾಗಿದ್ದೇನೆ. ಆದ್ದರಿಂದ ಈ ತಪ್ಪು ಸಂದೇಶಕ್ಕೆ ಯಾರೂ ಗಮನಕೊಡಬಾರದು ಹಾಗೂ ಆತಂಕಕ್ಕೆ ಒಳಗಾಗಬಾರದು ಎಂದಿದ್ದಾರೆ.
ತಪ್ಪು ಮಾಹಿತಿ ಹರಡಿದ ಕಿಡಿಗೇಡಿಗಳ ವಿರುದ್ಧ 27/2021ಸೆಕ್ಷನ್ 505(1)(ಆ) ಅಡಿ ಐಪಿಸಿ ಅಡಿ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post