ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮುಜರಾಯಿ ಇಲಾಖೆ ಸಕಾಲಕ್ಕೆ ವಿದ್ಯುತ್ ಬಾಕಿ ಪಾವತಿ ಮಾಡದ ಹಿನ್ನೆಲೆ ನಗರದ ಪುರಾಣ ಪ್ರಸಿದ್ಧ ಕೋಟೆ ಆಂಜನೇಯ ದೇವಾಲಯದಲ್ಲಿ ಕಳೆದ ನಾಲ್ಕಾರು ದಿನಗಳಿಂದ ವಿದ್ಯುತ್ ನಿಲುಗಡೆಯಾಗಿದೆ. ವಿದ್ಯುತ್ ಬಿಲ್ ಪಾವತಿಸಿ, ಕಗ್ಗತಲ್ಲಿರುವ ಧಾರ್ಮಿಕ ಕ್ಷೇತ್ರಕ್ಕೆ ಬೆಳಕು ಕೊಡಿ ಎಂದು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರಕ್ಕೆ ಆಗ್ರಹಿದ್ದಾರೆ.
ನಗರದ ಪುರಾಣ ಪ್ರಸಿದ್ಧ ಕೋಟೆ ಶ್ರೀ ಆಂಜನೇಯ ಸ್ವಾಮಿಗೆ ದೇವಸ್ಥಾನದಲ್ಲಿ ಸಂಜೆಯಾಗುತ್ತಿದ್ದಂತೆ ಕತ್ತಲೆ ವಾಸದ ದುರಂತ ಸ್ಥಿತಿ ಒದಗಿಬಂದಿದೆ. ಪ್ರತಿನಿತ್ಯ ಬೆಳಕಿಗಾಗಿ ಜನರೇಟರ್‌ಗಳನ್ನು ಬಳಸಲಾಗುತ್ತಿದ್ದು, ಭಕ್ತರೇ ಪ್ರತಿನಿತ್ಯ ಡಿಸೇಲ್ ವೆಚ್ಚ ನಿರ್ವಹಿಸುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

Also read: ನ.21ರಿಂದ ಕುವೆಂಪು ವಿವಿಯಲ್ಲಿ ವಾಣಿಜ್ಯಶಾಸ್ತ್ರ ಪಠ್ಯಕ್ರಮ ಕುರಿತು ಅಧ್ಯಾಪಕರಿಗೆ ತರಬೇತಿ ಕಾರ್ಯಾಗಾರ
ಈ ದೇವಳಕ್ಕೆ ಸಂಬಂಧಿಸಿದಂತೆ ಅಭಿವೃದ್ಧಿ ಸಮಿತಿಯನ್ನು ರಾಜ್ಯ ಸರ್ಕಾರ ನೇಮಿಸಿದೆ. ಅಭಿವೃದ್ಧಿ ಸಮಿತಿಗೆ ವಿದ್ಯುತ್ ಕಡಿತ ಮಾಡಿರುವ ವಿಚಾರದ ಬಗ್ಗೆ ಅರಿವಿದ್ದರೂ ಸಮಿತಿಯವರು ಸಹ ಸಮಸ್ಯೆ ಬಗ್ಗೆ ಪರಿಹರಿಸುವ ಕಾಳಜಿ ತೋರುತ್ತಿಲ್ಲ. ಮುಜರಾಯಿ ಇಲಾಖೆ ಹಾಗೂ ಆಡಳಿತ ನಡೆಸುತ್ತಿರುವ ಸರ್ಕಾರ ಮತ್ತು ಶಿವಮೊಗ್ಗ ಕ್ಷೇತ್ರದ ಜನಪ್ರತಿನಿಧಿಗಳಿಗೆ ಧಾರ್ಮಿಕ ಕ್ಷೇತ್ರ ಕಗ್ಗತ್ತಲ್ಲಲ್ಲಿರುವುದು  ಅರಿವಿಲ್ಲವೇ? ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಮೆಸ್ಕಾಂ ಇಲಾಖೆಗೆ ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ವಿದ್ಯುತ್ ಬಿಲ್ಲನ್ನು ಪಾವತಿ ಮಾಡಿ ಕತ್ತಲಲ್ಲಿರುವ ಧಾರ್ಮಿಕ ಕ್ಷೇತ್ರಕ್ಕೆ ಬೆಳಕು ನೀಡಬೇಕೆಂದು ಯುವ ಕಾಂಗ್ರೆಸ್ ಆಗ್ರಹಿಸುತ್ತದೆ. ಇಲ್ಲವಾದಲ್ಲಿ ಹೋರಾಟ ನಡೆಸುವುದು ಅನಿವಾರ್ಯ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.


 
	    	





 Loading ...
 Loading ... 
							



 
                
Discussion about this post