ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾಲಬಾಧೆಗೆ ಬೇಸತ್ತು ಗ್ರಾಮದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸನಗರ ತಾಲೂಕಿನ ಮಂಡ್ರಿ ಗ್ರಾಮದಲ್ಲಿ ನಡೆದಿದೆ.
ನಾಗರಾಜ್ (58) ಮೃತ ವ್ಯಕ್ತಿಯಾಗಿದ್ದು, ಇವರು ಮನೆಯ ಸಮೀಪದ ಕಾಡಿನಲ್ಲಿ ವಿಷ ಸೇವಿಸಿದ್ದರು. ಅಸ್ವಸ್ಥಗೊಂಡಿದ್ದ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ನಾಗರಾಜ್ ಅವರು ಜಮೀನಿನ ಅಭಿವೃದ್ಧಿಗೋಸ್ಕರ ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿ ಸಾಲ ಮಾಡಿದ್ದರು ಎನ್ನಲಾಗಿದೆ. ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Also read: ಆರ್ಥಿಕತೆ ಸದೃಢತೆಗೆ ಆಹಾರ ತಂತ್ರಜ್ಞಾನ ಹಾಗೂ ಕೃಷಿ ಅಧ್ಯಯನ ಬಹಳ ಮುಖ್ಯ: ಡಾ. ರವಿಶಂಕರ್ ಗೋಕರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















