ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಒಬ್ಬರು ಮೃತಪಟ್ಟು, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕ್ರೆಬೈಲ್ ಬಳಿಯಲ್ಲಿ ನಡೆದಿದೆ.
ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆ ಬರುತ್ತಿದ್ದ ಆಲ್ಟೊ ಕಾರ್ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮತ್ತೊರ್ವನ ಸ್ಥಿತಿ ಗಂಭೀರವಾಗಿದ್ದು ಆತನನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಬಸ್ಸಿನ ಮುಂಭಾಗ ಹಾಗೂ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಕಾರು ಬಲ ಭಾಗಕ್ಕೆ ಹೋಗಿ ಬಸ್ಸಿಗೆ ಡಿಕ್ಕಿ ಹೊಡೆದಿರುವುದರಿಂದ ಇಲ್ಲಿ ಕಾರಿನವರದ್ದೇ ತಪ್ಪು ಎಂದು ಸ್ಥಳೀಯರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















