ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಈ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ದುಡ್ಡು ನಡೆಯಲ್ಲ, ಶಿಕಾರಿಪುರದಲ್ಲಿ ಅಪ್ಪ-ಮಕ್ಕಳ ಶಿಕಾರಿ ಮಾಡುತ್ತೇನೆ, ಬಿಡುವುದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಕುಟುಂಬದ ವಿರುದ್ದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ #K S Eshwarappa ಗುಡುಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕಾರಿಪುರದಲ್ಲಿ ಅವರ ಸ್ಥಿತಿ ನೋಡಿಕೊಳ್ಳಲಿ. ಲಿಂಗಾಯತರಾದಿಯಾಗಿ ಎಲ್ಲರೂ ಅವರ ಕುಟುಂಬದ ಬಗ್ಗೆ ಜರಿಯುತ್ತಿದ್ದಾರೆ. ಈ ಚುನಾವಣೆಯಲ್ಲಿ ಯಾವುದೇ ದುಡ್ಡು ನಡೆಯಲ್ಲ. ಶಿಕಾರಿಪುರದಲ್ಲಿ ಅಪ್ಪ-ಮಕ್ಕಳ ಶಿಕಾರಿ ಮಾಡುತ್ತೇನೆ ಎಂದರು.
ನ್ಯಾಯಾಲಯದಲ್ಲಿ ವಕೀಲರನ್ನು ಭೇಟಿಯಾಗಿ ನನ್ನನ್ನು ಬೆಂಬಲಿಸುವಂತೆ ಮನವಿ ಮಾಡಿದ್ದೇನೆ. ನಿಮ್ಮ ಉದ್ದೇಶ ಸರಿಯಿದೆ. ನೀವು ಗೆಲ್ಲಿಸಲು ಎಲ್ಲ ರೀತಿಯಲ್ಲೂ ಬೆಂಬಲಿಸುತ್ತೇವೆ ಎಂದು ತಿಳಿಸಿದ್ದಾರೆ ಎಂದರು.
Also read: ಎಲ್ಲ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ? ಯಡಿಯೂರಪ್ಪ ಮಹತ್ವ ಘೋಷಣೆ
ಕ್ಷೇತ್ರದಾದ್ಯಂತ ಪ್ರವಾಸ ಮಾಡಿದ್ದೇನೆ. ನಾರಿ ಶಕ್ತಿ, ಯುವ ಶಕ್ತಿ, ರೈತ ಶಕ್ತಿ ನನ್ನ ಬೆಂಬಲಕ್ಕೆ ನಿಂತಿದೆ. ಹೋದೆಡೆಯೆಲ್ಲಾ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ನನ್ನ ಗೆಲುವು ನಿಶ್ಚಿತ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post