ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಫೆ.27ರ ಶನಿವಾರ ಮಧ್ಯಾಹ್ನ 12ಕ್ಕೆ ತಾಲೂಕು ಪಂಚಾಯತಿ ಅವರಣದಲ್ಲಿ ಶಿವಮೊಗ್ಗ ತಾಲೂಕು ಪಂಚಾಯಿತಿ ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ಉಪಸ್ಥಿತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ನೆರವೇರಿಸುವರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಸಭೆ ಶಾಸಕರಾದ ಹರತಾಳು ಹಾಲಪ್ಪ, ಆರಗ ಜ್ಞಾನೇಂದ್ರ, ಕೆ.ಬಿ.ಅಶೋಕ್ ನಾಯ್ಕ, ವಿಧಾನ ಪರಿಷತ್ ಶಾಸಕರಾದ ಆರ್. ಪ್ರಸನ್ನಕುಮಾರ್, ಆಯನೂರು ಮಂಜುನಾಥ್, ಸಿ.ಎಂ.ಇಬ್ರಾಹಿಂ, ಎಸ್.ಎಲ್. ಭೋಜೇಗೌಡ, ಎಸ್.ರುದ್ರೇಗೌಡ, ಭಾರತಿ ಶೆಟ್ಟಿ, ಕಆವೈಸಅ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಸಾಕೃಉಮಅ ಸಮಿತಿ ಅಧ್ಯಕ್ಷ ಆನಂದ, ಮಪ್ರಮಂ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ, ಸೂಡ ಅದ್ಯಕ್ಷೆ ಜ್ಯೋತಿ ಪ್ರಕಾಶ್, ತಾ.ಪಂ. ಅಧ್ಯಕ್ಷೆ ಗೀತಾ ಜಯಶೇಖರ್, ಜಿ..ಪಂ. ಉಪಾಧ್ಯಕ್ಷೆ ವೇದಾ ವಿಜಯಕುಮಾರ್ , ತಾ.ಪಂ. ಉಪಾಧ್ಯಕ್ಷೆ ನಿರ್ಮಲಾ ಮೋಹನ್‌ಕುಮಾರ್ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳು, ಜಿ.ಪಂ. ಮತ್ತು ತಾ.ಪಂ. ಸದಸ್ಯರು, ಗಣ್ಯರು ಪಾಲ್ಗೊಳ್ಳುವರು.









Discussion about this post