ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗ್ಯಾರೆಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ #H D Kumaraswamy ವಿರುದ್ಧ ರಾಜ್ಯದಾದ್ಯಂತ ಹೋರಾಟ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ #D K Shivakumar ಕರೆ ನೀಡಿದರು.
ನಗರದಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆ ಬಗ್ಗೆ ಜರಿದಿದ್ದಾರೆ. ಹಳ್ಳಿಯ ಹೆಣ್ಣು ಮಕ್ಕಳು ಗ್ಯಾರಂಟಿಗಳಿಂದ ಹಾದಿ ತಪ್ಪುತ್ತಿದ್ದಾರೆ ಎಂದು ದೂರಿದ್ದಾರೆ. ಇದು ಖಂಡನೀಯ. ರಾಜ್ಯದೆಲ್ಲೆಡೆ ಈ ಬಗ್ಗೆ ಹೋರಾಟ ಮಾಡಬೇಕು ಎಂದರು.

Also read: ಕಣ್ಣು ಹಾಯಿಸಿದಲ್ಲೆಲ್ಲಾ ಜನ | ಅಪಾರ ಬೆಂಬಲಿಗರೊಂದಿಗೆ ಗೀತಾ ಶಿವರಾಜಕುಮಾರ್ ನಾಮಪತ್ರ
ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಮಹಿಳೆಯರ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರಣಾಳಿಕೆಯಲ್ಲಿ ಸಾಮಾಜಿಕ ನ್ಯಾಯ, ಲಿಂಗ ಸಮಾನತೆ, ಅಲ್ಪಸಂಖ್ಯಾತರ ವೈಯಕ್ತಿಕ ಕಾನೂನುಗಳ ಸುಧಾರಣೆ, ಹಿರಿಯ ನಾಗರಿಕರು, ಅಂಗವಿಕಲರ ಅಭ್ಯುದಯಕ್ಕೆ ಒತ್ತು ನೀಡಲಾಗಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post