ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಸಣ್ಣ ರಸ್ತೆ ಹೊಂಡ ಕೂಡಾ ಮುಚ್ಚಲು ಆಗುತ್ತಿಲ್ಲ. ಸುಮ್ಮನೆ ಅಭಿವೃದ್ಧಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳು ಬೊಬ್ಬೆ ಹೊಡೆಯುತ್ತಿದ್ದಾರೆ. ಈ ಅಭಿವೃದ್ಧಿ ಶೂನ್ಯ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ #B S Yadiyurappa ಹೇಳಿದ್ದಾರೆ.
ಅವರು ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಭ್ರಷ್ಠ, ಬೇಜಾವಾಬ್ದಾರಿ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯಾದ್ಯಂತ ಹೋರಾಟ ಮಾಡುತ್ತಿದ್ದಾರೆ ನಾನೂ ಕೂಡ ಮುಂದಿನವಾರದಿಂದ ಬೀದಿಗಿಳಿದು ಸರ್ಕಾರದ ವಿರುದ್ಧ ಹೋರಾಟ ನಡೆಸಲಿದ್ದೇನೆ ಎಂದರು.

ಕೇಂದ್ರ ಸರ್ಕಾರ ಟ್ರಂಪ್ #Trump ಅವರಿಗೆ ಮಣಿದಿದೆ. ಮತ್ತು ಕದನವಿರಾಮಕ್ಕೆ ಒಪ್ಪಿಗೆ ನೀಡಿದ್ದಕ್ಕೆ ಟೀಕೆಗಳು ಬರುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮೋದಿ #Modi ಸರ್ಕಾರ ಈಗಾಗಲೇ ಪಾಕಿಸ್ತಾನಕ್ಕೆ #Pakistan ಮೇಲೆಳಲಾಗದಷ್ಟು ಹೊಡೆತ ನೀಡಿದೆ. ಭಾರತದ ಹೋರಾಟಕ್ಕೆ ಯಶಸ್ಸು ಸಿಕ್ಕಿದೆ. ನಮ್ಮ ಸೈನಿಕರು ದೊಡ್ಡ ಸಾಧನೆ ಮಾಡಿದ್ದಾರೆ. ಈಗಾಗಲೇ ಪಾಕಿಸ್ತಾನಕ್ಕೆ ತಕ್ಕಪಾಠ ಕಲಿಸಲಾಗಿದ್ದು, ಟೀಕೆಗಳಿಗೆ ಅರ್ಥವಿಲ್ಲ ಎಂದರು.

ಈ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post