ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶ್ರೀ ಮಾರಿಕಾಂಬ ಮೈಕ್ರೋ ಫೈನಾನ್ಸ್ ನಿಂದ ಮಹಿಳಾ ಸದಸ್ಯರಿಗೆ ಮೆಟ್ರೋ ಹೆಲ್ತ್ ಕಾರ್ಡ್ ವಿತರಣೆ-ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಆರ್ಥಿಕ ನೆರವು ನೀಡುವ ಕಾರ್ಯಕ್ರಮವನ್ನು ಜುಲೈ 20 ರಂದು ಸಂಜೆ 6.30ಕ್ಕೆ ಸಾಗರ ರಸ್ತೆಯ ಸುವರ್ಣ ಸಂಸ್ಕೃತಿ ಭವನದಲ್ಲಿ ಆಯೋಜಿಸಿದೆ ಎಂದು ಕಾರ್ಯ ನಿರ್ವಾಹಕ ನಿರ್ದೇಶಕ ಕೆ.ಈ. ಕಾಂತೇಶ್ K E Kantesh ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಶ್ರೀ ಮಾರಿಕಾಂಬ ಮೈಕ್ರೋಫೈನಾನ್ಸ್ ಕಳೆದ 7 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದೆ. 8 ಸಾವಿರಕ್ಕೂ ಹೆಚ್ಚು ಮಹಿಳಾ ಸದಸ್ಯರಿದ್ದಾರೆ. ಸುಮಾರು 65 ಕೋಟಿ ರೂ. ವಹಿವಾಟು ನಡೆಸಲಾಗಿದೆ. ಸದಸ್ಯರ ಅನುಕೂಲತೆಗಾಗಿ ಮೆಟ್ರೋ ಆಸ್ಪತ್ರೆ ವತಿಯಿಂದ ಹೆಲ್ತ್ ಕಾರ್ಡ್ ವಿತರಿಸಲಾಗುವುದು ಎಂದಿದ್ದಾರೆ.

Also read: ಶಂಕರಘಟ್ಟ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ: ಭಯಭೀತರಾದ ಸ್ಥಳೀಯರು
ಜುಲೈ 20ರ ಸಂಜೆ 6.30ಕ್ಕೆ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಕಾರ್ಯಕ್ರಮವನ್ನು ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಲಿದ್ದಾರೆ. ಮೆಟ್ರೋ ಯುನೈಟೆಡ್ ಹೆಲ್ತ್ ಕೇರ್ ಆಸ್ಪತ್ರೆಯ ವೈದ್ಯರು ಮತ್ತು ಅಧಿಕಾರಿಗಳು ಭಾಗವಹಿಸುವರು. ಮೈಕ್ರೋ ಫೈನಾನ್ಸ್ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಶಂಕರ್ ಗನ್ನಿ, ವಿಶ್ವಾಸ್, ಮಹೇಶ್, ವಿದ್ಯಾಧರ್ ಇದ್ದರು.










Discussion about this post