No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೋವಿಡ್ ನಿಂದ ಮೃತರ ಕುಟುಂಬಕ್ಕೆ ಆರ್ಥಿಕ ನೆರವು : ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

kalpa News by kalpa News
October 13, 2021
in ಶಿವಮೊಗ್ಗ
0
ಕೋವಿಡ್ ನಿಂದ ಮೃತರ ಕುಟುಂಬಕ್ಕೆ ಆರ್ಥಿಕ ನೆರವು : ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕೋವಿಡ್-19 ಸೋಂಕಿನಿಂದ ಮೃತ ವ್ಯಕ್ತಿಯ ಅವಲಂಬಿತರಿಗೆ ಸರ್ಕಾರವು ಈಗಾಗಲೇ ಘೋಷಿಸಿರುವ ಆರ್ಥಿಕ ನೆರವನ್ನು ಒದಗಿಸಲು ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಹಶೀಲ್ದಾರರು ಹಾಗೂ ತಾಲೂಕು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಿಂದ ಏರ್ಪಡಿಸಲಾಗಿದ್ದ ಕೋವಿಡ್ ಮೃತ ಕುಟುಂಬಕ್ಕೆ ಆರ್ಥಿಕ ನೆರವು ಒದಗಿಸುವುದು, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಮನೆ, ಬೆಳೆ, ಆಸ್ತಿ, ಜನ-ಜಾನುವಾರು ಹಾನಿಗಳ ಕುರಿತ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಈಗಾಗಲೇ ಸರ್ಕಾರವು ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತರಾದ ವ್ಯಕ್ತಿಗಳಲ್ಲಿ ಮೊದಲ ಹಂತದಲ್ಲಿ 1064 ಜನ ಮೃತರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಮೃತರ ಕುಟುಂಬದ ಸದಸ್ಯರು ನೆರವಿಗಾಗಿ ಅರ್ಜಿ ಸಲ್ಲಿಸುವವರೆಗೆ ಕಾಯದೇ ಕಂದಾಯ ಇಲಾಖೆಯ ಅಧಿಕಾರಿಗಳು ಮೃತರ ಮನೆಗೆ ಧಾವಿಸಿ, ಅವರಿಂದ ಅರ್ಜಿ ಹಾಗೂ ಮಾಹಿತಿ ಪಡೆದು, ಆನ್‌ಲೈನ್ ಮೂಲಕ ಮಾಹಿತಿ ಉನ್ನತೀಕರಿಸಿ ಮಾಹಿತಿ ನೀಡುವಂತೆಯೂ ಅವರು ಸೂಚಿಸಿದರು.

ಮೃತರ ಕುಟುಂಬವು ಬಿ.ಪಿ.ಎಲ್. ಕುಟುಂಬ ವ್ಯಾಪ್ತಿಗೊಳಪಟ್ಟಿದ್ದರೆ ರಾಜ್ಯ ಸರ್ಕಾರವು ಒಂದು ಲಕ್ಷ ರೂ.ಗಳ ಆರ್ಥಿಕ ನೆರವು ಹಾಗೂ ಕೇಂದ್ರ ಸರ್ಕಾರವು ಕೋವಿಡ್‌ನಿಂದ ಮೃತರಾದ ಎಲ್ಲಾ ಕುಟುಂಬಗಳಿಗೆ 50,000ರೂ. ಗಳ ನೆರವು ಒದಗಿಸಲಿದೆ. ಈ ಪರಿಹಾರಧನ ಪಡೆಯಲು ಜಿಲ್ಲೆಯಲ್ಲಿ ಸಲ್ಲಿಕೆಯಾದ ಅರ್ಜಿ ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ. ಸಂಬಂಧಿತ ಅಧಿಕಾರಿಗಳು ಇನ್ನಾದರೂ ವಿಳಂಬಕ್ಕೆ ಅವಕಾಶ ಕೊಡದೆ ಈ ತಿಂಗಳ ಮಾಸಾಂತ್ಯದೊಳಗಾಗಿ ಮಾಹಿತಿಯನ್ನು ಸಂಗ್ರಹಿಸಿ, ಫಲಾನುಭವಿಗಳಿಗೆ ಸೌಲಭ್ಯ ದೊರಕಿಸುವ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಅವರು ತಾಕೀತು ಮಾಡಿದರು.

ಆನ್‌ಲೈನ್‌ನಲ್ಲಿ ಮಾಹಿತಿ ತುಂಬಲು ತಾಂತ್ರಿಕ ಸಮಸ್ಯೆಗಳು ಎದುರಾದಲ್ಲಿ ಆರೋಗ್ಯ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸಮನ್ವಯತೆ ಸಾಧಿಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಮೃತ ವ್ಯಕ್ತಿಯು ಹೊರಗಿನ ಜಿಲ್ಲೆಯವರಾಗಿದ್ದಲ್ಲಿ ಅಂತಹವರು ತಮ್ಮ ಮೂಲ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಕೋವಿಡ್-19 ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಳ್ಳಲಾದ ಕಾರ್ಯಕ್ರಮ ಹಾಗೂ ಚಟುವಟಿಕೆಗಳಿಗೆ ಜಿಲ್ಲಾಡಳಿತ ಬಿಡುಗಡೆಗೊಳಿಸಿದ ಅನುದಾನದ ಖರ್ಚು-ವೆಚ್ಚಗಳ ಕುರಿತು ಬಳಕೆ ಪ್ರಮಾಣಪತ್ರವನ್ನು ಕೂಡಲೇ ನೀಡಬೇಕು. ಕೊರತೆ ಉಂಟಾಗಿದ್ದಲ್ಲಿ ಅನುದಾನಕ್ಕೆ ಬೇಡಿಕೆ ಸಲ್ಲಿಸಿದಲ್ಲಿ ಅನುದಾನ ಬಿಡುಗಡೆಗೊಳಿಸಲಾಗುವುದು ಎಂದರು.

ಕೋವಿಡ್ ನಿಯಂತ್ರಣಕ್ಕಾಗಿ 18+ ಇರುವ ಎಲ್ಲರಿಗೂ ಸರ್ಕಾರದಿಂದಲೇ ಉಚಿತವಾಗಿ ಲಸಿಕೆಯನ್ನು ಹಾಕಲಾಗುತ್ತಿದೆ. ಈವರೆಗೂ ಮೊದಲ ಹಂತದ ಲಸಿಕೆ ಪಡೆಯದಿರುವ ವ್ಯಕ್ತಿಗಳನ್ನು ಗುರುತಿಸಿ, ಲಸಿಕೆ ಹಾಕುವ ಕಾರ್ಯ ನಡೆಯಬೇಕಾಗಿದೆ. ಅದಕ್ಕಾಗಿ ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತೆಯರು, ತಾಲೂಕು ವೈದ್ಯಾಧಿಕಾರಿಗಳ ಉಪಸ್ಥಿತಿಯಲ್ಲಿ ತಹಶೀಲ್ದಾರರು ಸಭೆ ನಡೆಸಿ, ಎಲ್ಲಾ ಗ್ರಾಮಗಳಲ್ಲಿ ಆಂದೋಲನ ರೂಪದಲ್ಲಿ ಕಾರ್ಯಕ್ರಮ ಏರ್ಪಡಿಸಿ, ಜನರ ಮನವೊಲಿಸಿ, ಲಸಿಕೆ ನೀಡಲು ಕ್ರಮ ವಹಿಸಬೇಕು. ಅದಕ್ಕೂ ಮುನ್ನ ಗ್ರಾಮಗಳಲ್ಲಿ ಲಸಿಕೆ ಪಡೆದ ಮತ್ತು ಪಡೆಯದಿರುವ ವ್ಯಕ್ತಿಗಳ ವಿವರವಾದ ಮಾಹಿತಿ ಹೊಂದಿರಬೇಕು. ಈ ಮಹತ್ವದ ಕಾರ್ಯದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಸಹಕಾರ ಪಡೆಯುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಅಲ್ಪ ಪ್ರಮಾಣದ ಬೆಳೆ ಹಾನಿಯಾಗಿರುವುದನ್ನು ಗಮನಿಸಲಾಗಿದೆ. 105 ಮನೆಗಳ ಭಾಗಶಃ ಹಾನಿಯಾಗಿರುವುದು ಹಾಗೂ 2 ಜೀವಹಾನಿ ಪ್ರಕರಣಗಳಾಗಿರುವುದನ್ನು ಗುರುತಿಸಲಾಗಿದೆ. ಅಲ್ಲದೇ ತಾಲೂಕು ಮಟ್ಟದ ಅಧಿಕಾರಿಗಳು ಈವರೆಗೆ ತಾವು ಸಂಗ್ರಹಿಸಿದ ಕ್ರೋಢೀಕೃತ ವರದಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿಸುವಂತೆ ಸೂಚಿಸಿದರು.

ತಹಶೀಲ್ದಾರರು ತಮ್ಮ ವ್ಯಾಪ್ತಿಯಲ್ಲಿ ಜಾತಿಪ್ರಮಾಣ ಕೋರಿ ಬರುವ ಅರ್ಜಿಗಳನ್ನು ಕೂಲಂಕಶವಾಗಿ ಪರಿಶೀಲಿಸಿ ಪ್ರಮಾಣಪತ್ರ ನೀಡಬೇಕು. ಸುಳ್ಳು ಜಾತಿಪ್ರಮಾಣ ಪತ್ರ ನೀಡಿದ ಅಧಿಕಾರಿ-ಸಿಬ್ಬಂಧಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಲಿದೆ. ಈಗಾಗಲೇ ಇತರೆ ತಾಲೂಕುಗಳಲ್ಲಿ ನೀಡಲಾಗಿರುವ ಸುಳ್ಳು ಪ್ರಮಾಣಪತ್ರಗಳ ಕುರಿತು ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ 7 ಅರ್ಜಿಗಳನ್ನು ವಜಾಗೊಳಿಸಲಾಗಿದೆ. ಅವುಗಳನ್ನು ತಮ್ಮ ಕಚೇರಿಯ ದಾಖಲೆಯಲ್ಲಿಯೂ ರದ್ದುಗೊಳಿಸುವಂತೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್.ಹೊನ್ನಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕೆ. ನಾಗರಾಜ್, ಆರ್.ಸಿ.ಹೆಚ್. ಅಧಿಕಾರಿ ಡಾ. ನಾಗರಾಜ್‌ನಾಯ್ಕ್ ಸೇರಿದಂತೆ ಎಲ್ಲಾ ತಾಲೂಕುಗಳ ತಹಶೀಲ್ದಾರರು, ತಾಲೂಕು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DC ShivakumarKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಜಿಲ್ಲಾಧಿಕಾರಿ ಶಿವಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬದಲಾದ ಕಾಲಘಟ್ಟಕ್ಕೆ ತಕ್ಕಂತೆ ಅಂಚೆ ಇಲಾಖೆ ತನ್ನ ವ್ಯಾಪ್ತಿಯನ್ನು ವೃದ್ಧಿಸಿಕೊಂಡಿದೆ: ಪ್ರೊ. ತ್ಯಾಗರಾಜ್ ಅಭಿಪ್ರಾಯ

Next Post

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಗಳೂರಿಗೆ ಭೇಟಿ…

kalpa News

kalpa News

Next Post
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಗಳೂರಿಗೆ ಭೇಟಿ…

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಗಳೂರಿಗೆ ಭೇಟಿ...

Leave a Reply Cancel reply

Your email address will not be published. Required fields are marked *

No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!