ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನೂರಾರು ಜನರ ಮುಂದೆಯೇ ಎಪಿಎಂಸಿ ಆಂಜನೇಯ ಸ್ವಾಮಿ ದೇವಸ್ಥಾನದ ತೆರವಿನ ವೇಳೆಯಲ್ಲಿ ನಾಗರ ಹಾವನ್ನು ಹೊಡೆದು ಸಾಯಿಸಿದ ಶಿವಮೊಗ್ಗ ಸ್ಮಾರ್ಟ್‌ಸಿಟಿ ಇಂಜಿನಿರ್ ಕೆ.ವಿ.ವಿಜಯಕುಮಾರ್ ಹಾಗೂ ರಾಜ್‌ಕುಮಾರ್ ಮತ್ತು ಕೆಲಸ ಮಾಡುತ್ತಿದ್ದ ನಾಗಪ್ಪ ಅವರ ವಿರುದ್ಧ ಅರಣ್ಯ ಇಲಾಖೆ ಶಂಕರ ವಲಯ ವಿಭಾಗದ ಅಧಿಕಾರಿ ದೂರು ದಾಖಲಿಸಿದ್ದಾರೆ.
ಇತ್ತೀಚೆಗೆ ಸ್ಮಾರ್ಟ್‌ಸಿಟಿ ಕಾಮಗಾರಿ ಹಿನ್ನೆಲೆಯಲ್ಲಿ ಹಾವನ್ನು ಹೊಡೆದು ಸಾಯಿಸಲಾಗಿತ್ತು. ಈ ಸಂಬಂಧ ನಗರಪಾಲಿಕೆ ಸದಸ್ಯ ರಾಹುಲ್ ಬಿದರೆ ಸೇರಿದಂತೆ ಬಿಜೆಪಿ, ವಿಹೆಚ್‌ಪಿಯ ಕೆಲ ಮುಖಂಡರು ಅಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ವಿಜಯ್‌ಕುಮಾರ್ ಸೇರಿದಂತೆ ಮೂವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಸೆಕ್ಷನ್ ನಂ.9,31 ಮತ್ತು 51ರ ಅಡಿಯಲ್ಲಿ ಕೇಸ್ ದಾಖಲಿಸಿಕೊಳ್ಳಲಾಗಿದೆ.
ಈ ಮೂವರು ತಲೆಮರೆಸಿಕೊಂಡಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post