ಅಗ್ನಿಶಾಮಕದಳದ ನಿರ್ಲಕ್ಷ್ಯವನ್ನು ಇನ್ನುಮುಂದೆ ಸಹಿಸಲ್ಲ. ಮೊನ್ನೆ ನಡೆದ ಅಗ್ನಿ ಅವಘಡದಲ್ಲಿ ಸಾವಿರಾರು ಜನರಿಗೆ ಉದ್ಯೋಗ ನೀಡಿದ ಶರತ್ ಭೂಪಾಳಂ ಸಾವು ಕಂಡಿದ್ದು, ಅವರ ಕುಟುಂಬದವರು ಅಗ್ನಿ ಶಾಮಕದಳದ ನಿರ್ಲಕ್ಷವೇ ಕಾರಣವೆಂದು ಆರೋಪಿಸಿ ಅದಕ್ಕೆ ಪೂರಕ ದಾಖಲೆಗಳನ್ನು ನೀಡಿದ್ದಾರೆ. ಹಾಗಾಗಿ ಇಂತಹ ಘಟನೆಗಳು ಸಂಭವಿಸಿದಾಗ ಇಲಾಖೆ ಸಂಪೂರ್ಣ ಸಜ್ಜಾಗಿರಬೇಕು ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಶರತ್ ಭೂಪಾಳಂ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದಾಗ ಅಲ್ಲಿ ಹಾಜರಾದ ಅಗ್ನಿಶಾಮಕ ಸಿಬ್ಬಂದಿಗಳನ್ನು ಕರೆಸಿ ಅವರಿಂದ ಸಂಪೂರ್ಣ ಮಾಹಿತಿ ಪಡೆದರು. ಹಾಗೂ ವೈಫಲ್ಯ ಮುಚ್ಚಿ ಹಾಕಲು ನಾನು ಬಿಡುವುದಿಲ್ಲ ತಪ್ಪಿತಸ್ಥರ ಮೇಲೆ ಕ್ರಮಕೈಗೊಳ್ಳುವುದು ನಿಶ್ಚಿತ. ಯಾವುದೇ ಕಾರಣಕ್ಕೂ ಸತ್ಯವನ್ನು ಮುಚ್ಚಿಡಬೇಡಿ. ಇನ್ನು ಮುಂದೆ ಈ ರೀತಿಯ ಘಟನೆಗಳಿಗೆ ಆಸ್ಪದವಿಲ್ಲ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







