ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮನೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸೋರಿಕೆಯಿಂದ #Cooking gas leak ಹೊತ್ತಿದ ಬೆಂಕಿಗೆ ಮನೆ ಮಾಲೀಕ ಮಲ್ಲಿಕಾರ್ಜುನ್ ತೀವ್ರ ರೀತಿ ಗಾಯಗೊಂಡಿರುವ ಘಟನೆ ಶಿಕಾರಿಪುರ ಪಟ್ಟಣದ ಕುಂಬಾರಗುಂಡಿ ಬಡಾವಣೆಯಲ್ಲಿ ನಡೆದಿದೆ.
ಮನೆಗೆ ಬಂದ ತುಂಬಿದ ಅಡುಗೆ ಅನಿಲ ಸಿಲಿಂಡರ್ ಅನ್ನು ಮಲ್ಲಿಕಾರ್ಜುನ್ ಹಾಗೂ ಅವರ ಪತ್ನಿ ಓಲೆಗೆ ಸಂಪರ್ಕ ನೀಡುವ ಸಂದರ್ಭದಲ್ಲಿ ಅನಿಲ ಸೋರಿಕೆಯಾಗಿ ಬೆಂಕಿ ಹರಡಿಕೊಂಡಿದೆ. ಬೆಂಕಿಯಿಂದ ತೀವ್ರ ರೀತಿ ಗಾಯಗೊಂಡ ಮನೆ ಮಾಲೀಕ ಮಲ್ಲಿಕಾರ್ಜುನ್ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಕಿಯ ತೀವ್ರತೆಗೆ ಮನೆಯ ಮೇಲ್ಚಾವಣಿ ಹಾರಿ ಹೋಗಿ ಮನೆಗೆ ಬಹುತೇಕ ಹಾನಿಯಾಗಿದೆ. ಅಡುಗೆ ಮನೆಯಲ್ಲಿದ್ದ ವಸ್ತುಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ.
ಈ ಸಂದರ್ಭದಲ್ಲಿ ಮನೆಯಿಂದ ಹೊರಗೆ ಓಡಿ ಬಂದ ಮಲ್ಲಿಕಾರ್ಜುನ್ ಅಕ್ಕ ಹಾಗೂ ಪತ್ನಿ ಅವರಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ ಬೆಂಕಿ ಹರಡಿದ ಸಂದರ್ಭದಲ್ಲಿ ಮನೆ ಸಮೀಪವಿದ್ದ ಎದುರು ಮನೆ ಮಹಿಳೆ ಕಮಲಮ್ಮ ಅವರ ಕಾಲಿಗೆ ಬೆಂಕಿ ತಗುಲಿದ ಪರಿಣಾಮ ಸಣ್ಣ ಪುಟ್ಟ ಗಾಯಗಳಾಗಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















