ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಗಾಂಧಿ ಬಜಾರ್‌ನ ಉಪ್ಪಾರಕೇರಿಯ 2ನೇ ತಿರುವಿನಲ್ಲಿರುವ ಬಟ್ಟೆ ಮಾರ್ಕೆಟ್ ನಲ್ಲಿ ಸೋಮವಾರ ರಾತ್ರಿ ಶಾರ್ಟ್ ಸರ್ಕಿಟ್ ನಿಂದ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು 7ರಿಂದ 8 ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ,
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ #K S Eshwarappa ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಷ್ಟವಾದ ವ್ಯಾಪಾರಸ್ಥರಿಗೆ ಸಾಂತ್ವನ ಹೇಳಿ ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.

Also read: ಪುಟ್ಬಾಲ್ ಲೀಗ್: ಜುಲೈ 3ರಂದು ಫೈನಲ್ ಪಂದ್ಯಾವಳಿ
ಈ ಘಟನೆಗೆ ಸಂಬಂಧಿಸಿದಂತೆ ಅಗ್ನಿಶಾಮಕದಳದ ಸಿಬ್ಬಂದಿಯು ತಕ್ಷಣವೇ ಕಾರ್ಯಪ್ರವತ್ತರಾದ ಹಿನ್ನಲೆಯಲ್ಲಿ ದೊಡ್ಡ ಅನಾಹುತ ತಪ್ಪಿದೆ. ಇದಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಅಭಿನಂದನೆ ತಿಳಿಸಿದರು. ಮುಂಬರುವ ದಿನಗಳಲ್ಲಿ ಇಂತಹ ಅಗ್ನಿ ಅನಾಹುತಗಳು ಸಂಭವಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಈ ಕುರಿತಂತೆ ರಾಜ್ಯ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಬೇಕಾಗಿರುವಂತ ಪರಿಹಾರವನ್ನು ಸಂತ್ರಸ್ತರಿಗೆ ಶೀಘ್ರದಲ್ಲೇ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಶಾಸಕರು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post