ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಮಾನ ಟಿಕೆಟ್ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಶಿವಮೊಗ್ಗ ದಲ್ಲಿ (Shivamogga) ಬೆಳಕಿಗೆ ಬಂದಿದೆ.
ಭಾಗ್ಯವಂತಿ ಮಲ್ಟಿ ಬಿಸಿನೆಸ್ ಸರ್ವೀಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯ ಪ್ರತಿನಿಧಿಗಳೆಂದು ನಟಿಸಿ ಈ ವಂಚನೆ ಎಸಗಿದ್ದಾರೆ ಎಂದು ಸಿಇಎನ್ ಪೊಲೀಸರಿಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ.
Also read>> Shikaripura | ಬದುಕಿಗೆ ಸರಿಯಾದ ಮಾರ್ಗದರ್ಶನ ನೀಡುವ ವ್ಯಕ್ತಿಯೇ ಗುರು
ದೂರುದಾರರು, ಅವರ ಪತ್ನಿ ಹಾಗೂ ಮಗನ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು 11,09,000 ರೂಪಾಯಿಗಳನ್ನು ಆರೋಪಿಗಳು ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ.
ಘಟನಾ ಸಂಬಂಧ ಶಿವಮೊಗ್ಗದ ಸಿ ಇ ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
