ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಶೂನ್ಯ ಸರ್ಕಾರ ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ D S Arun ಹೇಳಿದರು.
ಅವರು ಇಂದು ಬಿಜೆಪಿ ಕಛೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 11 ತಿಂಗಳಾದರು ಯಾವುದೇ ಅಭಿವೃದ್ಧಿಯಾಗಲಿಲ್ಲ. ನೀರಾವರಿ ಯೋಜನೆಗಳು ನೆನೆಗುದ್ದಿಗೆ ಬಿದ್ದವು. ಒಂದು ಕಿ.ಮೀ.ರಸ್ತೆಯನ್ನು ಮಾಡಲಿಲ್ಲ. ಗ್ಯಾರಂಟಿಗಳ ಅಲೆಗಳಲ್ಲಿ ತೇಲಾಡುತ್ತಿದೆ ಎಂದು ದೂರಿದರು.

ದೇವಸ್ಥಾನಗಳ ಸಂಗ್ರಹದ ಹಣವನ್ನು ಸರ್ಕಾರಕ್ಕೆ ಮೊದಲೇ ಶೇ.10ರಷ್ಟು ಕೊಡಬೇಕು ಎಂಬ ನಿಯಮವನ್ನು ಈಗಿನ ಸರ್ಕಾರ ಜಾರಿಗೆ ತಂದಿದೆ. ಇದು ಸರಿಯಲ್ಲ. ನಮ್ಮ ಸರ್ಕಾರ ಇದ್ದಾಗ ದೇವಸ್ಥಾನಗಳು ತನ್ನೆಲ್ಲ ಕೆಲಸಗಳನ್ನು ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಿಗೆ ವಿನಿಯೋಗಿಸಿ ಉಳಿದ ಹಣದಲ್ಲಿ ಶೇ.10ರಷ್ಟು ನೀಡಬೇಕು ಎಂದು ಆದೇಶ ತಂದಿತ್ತು. ಆದರೆ ಇದಕ್ಕೆ ವಿರುದ್ಧವಾಗಿ ಕಾಂಗ್ರೆಸ್ ಸರ್ಕಾರ ನಿಯಮವನ್ನು ರೂಪಿಸಿದೆ ಎಂದರು.

ಕಾಂಗ್ರೆಸ್ ಸರ್ಕಾರ ದಲಿತ ವಿರೋಧಿ ಸರ್ಕಾರವು ಹೌದು, ದಲಿತರಿಗಾಗಿ ಇಟ್ಟಿದ 53 ಸಾವಿರ ಕೋಟಿ ಹಣವನ್ನು ಬೇರೆ ಕಡೆ ವರ್ಗಾಯಿಸಲಾಗಿದೆ. ಇದರಲ್ಲಿ ಗ್ಯಾರಂಟಿಗಳು ಸೇರಿಕೊಂಡಿವೆ. ದಲಿತರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಬೇರೆ ಕಡೆ ವರ್ಗಾಯಿಸುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

Also read: ಎಪ್ರಿಲ್ 1-10: ಸ್ನೇಹಾ ಅಕಾಡೆಮಿಯಿಂದ ಉಚಿತ ಚಿತ್ರ ರಚನೆ ಶಿಬಿರ | ಮೊದಲು ಬಂದರಷ್ಟೆ ಆದ್ಯತೆ
ಬಿಜೆಪಿಯಲ್ಲಿಯೇ ಕುಟುಂಬ ರಾಜಕಾರಣ ಹೆಚ್ಚಾಗಿದೆಯಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯಲ್ಲಿ ಕೆಳಹಂತದಿಂದ ಕೆಲಸ ಮಾಡಿದವರಿಗೆ ಟಿಕೇಟ್ ನೀಡಲಾಗಿದೆ. ಉದಾಹರಣೆಗೆ ನನ್ನನ್ನೇ ತೆಗೆದುಕೊಂಡರೆ, ನಾನು ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷಕ್ಕೆ ದುಡಿದಿದ್ದೇನೆ, ಆದರೆ ಯಾವ ಕೆಲಸವನ್ನು ಮಾಡದವರಿಗೆ ಈ ಬಾರಿ ಕಾಂಗ್ರೆಸ್ ಟಿಕೇಟ್ ನೀಡಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಟಿ.ಡಿ. ಮೇಘರಾಜ್, ಎಸ್. ದತ್ತಾತ್ರಿ, ಚಂದ್ರಶೇಖರ್, ಅಣ್ಣಪ್ಪ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post