ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ Vijayendra Yadiyurappa ಅವರು ಇಂದು ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿದಾಗ ಪಕ್ಷದ ಪದಾಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು.
ಮಿಚಾಂಗ್ ಚಂಡಮಾರುತದಿಂದ Michong Cyclone ಸಂಕಷ್ಟಕ್ಕೆ ಸಿಲುಕಿರುವ ತಮಿಳುನಾಡಿಗೆ ಸಹಾಯ ಮಾಡುವಂತೆ ದೇಶವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ PMNarendraModi ಅವರು ಕರೆ ನೀಡಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಪರಿಹಾರ ಸಾಮಾಗ್ರಿಗಳನ್ನು ಕೊಂಡೊಯ್ಯಲಿರುವ ವಾಹನಗಳಿಗೆ ರಾಜ್ಯಾಧ್ಯಕ್ಷರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಪ್ರಭು ಚೌವ್ಹಾಣ್, ಶಾಸಕ ಎಸ್.ಆರ್. ವಿಶ್ವನಾಥ್, ಮಹಂತೇಶ ಕವಟಗಿಮಠ, ಜಿಲ್ಲಾಧ್ಯಕ್ಷರು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Also read: ಅಗ್ನಿ ಅವಘಡ ಸಂಭವಿಸಿದಾಗ ಯಾವ ರೀತಿಯ ಕ್ರಮ ಕೈಗೊಳ್ಳಬೇಕು?



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















