ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದ ಹಲವು ಭಾಗಗಳಲ್ಲಿ ಆಹಾರದ ಅವಶ್ಯಕತೆ ಇರುವವರಿಗೆ “ಹಸಿದವರಿಗೆ ಅನ್ನ” ಎಂಬ ಕಾರ್ಯಕ್ರಮದಡಿ ಊಟದ ಪ್ಯಾಕೆಟ್ ಹಾಗೂ ನೀರಿನ ಬಾಟಲ್‌ಗಳನ್ನು ನಗರದ ಖಾಸಗಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮೆಗ್ಗಾನ್ ಆಸ್ಪತ್ರೆ ಹಾಗೂ ಹಲವು ಖಾಸಗಿ ಆಸ್ಪತ್ರೆಗಳ ಮುಂಭಾಗ ಆಹಾರದ ಅವಶ್ಯಕತೆ ಇರುವ ರೋಗಿಗಳ ಸಂಬಂಧಿಗಳಿಗೆ ಆಹಾರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಗಿರೀಶ್, ಯುವ ಕಾಂಗ್ರೆಸ್‌ನ ಬ್ಲಾಕ್ ಅಧ್ಯಕ್ಷರುಗಳಾದ ಎಸ್. ಕುಮರೇಶ್, ಯುವ ಕಾಂಗ್ರೆಸ್ ಮುಖಂಡ ಈಟಿ ನಿತಿನ್, ಟಿವಿ ರಂಜಿತ್, ಮುರುಳಿ ಗಗನ್, ವೆಂಕಟೇಶ್ ಕಲ್ಲೂರ್, ಧನುಷ್, ಶಿವು, ಯೋಗೀಶ ಇತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post