ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೆಲಸ ಮಾಡುವ ಹುಮ್ಮಸ್ಸಿದೆ, ಸಮಯವು ಇದೆ, ಸಾಧನೆಗಳನ್ನು ಮಾಡಿರುವೆ ಹಾಗಾಗಿ ಈ ಬಾರಿ ನನಗೊಂದು ಅವಕಾಶ ಕೊಡಿ ಮತ್ತಷ್ಟು ಕೆಲಸ ಮಾಡುವೆ ಎಂದು ನೈರುತ್ಯ ಪದವೀಧರ ಕ್ಷೇತ್ರದಿಂದ ಸ್ವತಂತ್ರವಾಗಿ ಸ್ಪರ್ಧಿಸಿರುವ ಕೆ. ರಘುಪತಿ ಭಟ್ #Raghupathi Bhat ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯಲ್ಲಿ ನಾನು ಟಿಕೇಟ್ ಆಕಾಂಕ್ಷಿಯಾಗಿದ್ದೆ ಆದರೆ ಅದು ಏಕೋ ಟಿಕೇಟ್ ತಪ್ಪಿದೆ. ಬಿಜೆಪಿಯಲ್ಲಿ ಪಕ್ಷದ ಸುತ್ತ ಸುತ್ತುವವರಿಗೆ ಆದ್ಯತೆ ನೀಡುತ್ತಿರುವುದರಿಂದ ಬೇಸರವಾಗಿದೆ. ನನಗೆ ಟಿಕೇಟ್ ನೀಡುತ್ತೇವೆ ಎಂದು ಹೇಳಿದ್ದರು. ಆದರೆ ಸಿಗಲಿಲ್ಲ. ಹೋಗಲಿ ನಿಷ್ಠಾವಂತ ಕಾರ್ಯಕರ್ತರಿಗೆ ಸಿಕ್ಕಿದ್ದರೂ ಕೂಡ ನಾನು ಚುನಾವಣೆಗೆ ಸ್ಪರ್ಧಿಸುತ್ತಿರಲಿಲ್ಲ ಎಂದರು.

Also read: ಈ ಕಾರಣಕ್ಕಾಗಿ ನಾನು ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದೇನೆ: ರಘುಪತಿ ಭಟ್ ಹೇಳಿದ್ದೇನು?
2001ರಿಂದ ನನ್ನ ರಾಜಕೀಯ ಜೀವನ ಆರಂಭವಾಗಿದೆ. 3 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ನಾನು ಶಾಸಕನಾಗಿದ್ದಾಗ ಪೂರ್ಣಾವಾಧಿಯಲ್ಲಿ ಕೆಲಸ ಮಾಡಿದ್ದೇನೆ. ವಿವಿಧ ಹುದ್ದೆಗಳಿಗೆ ನ್ಯಾಯ ನೀಡಿದ್ದೇನೆ. ನನ್ನ ಕ್ಷೇತ್ರವನ್ನು ಸಂಪೂರ್ಣವಾಗಿ ಅಭಿವೃದ್ಧಿ ಮಾಡಿದ್ದೇನೆ. ಸಾಕಷ್ಟು ಸಮಸ್ಯೆಗಳಿಗೆ ಉತ್ತರ ಕೊಟ್ಟಿದ್ದೇನೆ. ಹಲವು ಟ್ರಸ್ಟ್ ಗಳ ಮೂಲಕ ಕೆಲಸ ಮಾಡಿದ್ದೇನೆ. ಈ ಎಲ್ಲಾ ಕೆಲಸಗಳು ಪದವೀಧರ ಮತದಾರರಿಗೆ ಗೊತ್ತಿದೆ. ಹಾಗಾಗಿ ನಾನು ಈ ಬಾರಿ ಗೆಲ್ಲುತ್ತೇನೆ ಎಂದರು.

ನಾನು ಗೆದ್ದರೆ ನೈರುತ್ಯ ಪದವೀಧರರ ಸಮಸ್ಯೆಗಳಿಗೆ ಸ್ಪಂಧಿಸುವೆ, ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ನನ್ನ ಮೊದಲ ಆದ್ಯತೆ ಇದೆ. ಪದವೀಧರರಿಗೆ ಕೌಶಲ್ಯ ತರಬೇತಿ ನೀಡುವುದು, ಉದ್ಯಮ ವಲಯಗಳನ್ನು ಸ್ಥಾಪಿಸುವುದು ಸೇರಿದಂತೆ ಹಲವು ಅಭಿವೃದ್ಧಿಗಳನ್ನು ಸರ್ಕಾರದ ಮಟ್ಟದಲ್ಲಿ ಜಾರಿಗೆ ತರಲು ನಾನು ಖಂಡಿತ ಪರಿಷತ್‍ನಲ್ಲಿ ಧ್ವನಿಯೆತ್ತುತ್ತೇನೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎಂ. ಶಂಕರ್, ದೇವದಾಸ್‍ನಾಯಕ್, ಕಾಚಿನಕಟ್ಟೆ ಸತ್ಯನಾರಾಯಣ, ವಕೀಲ ವಾಗೀಶ್, ಅ.ಮಾ.ಪ್ರಕಾಶ್, ರಾಜಯ್ಯ, ಪ್ರದೀಪ ಚಂದ್ರ, ಮೋಹನ್ ಜಾದವ್, ಎಚ್.ಶಂಕರ್, ಚಂದ್ರಶೇಖರ್, ನರೇಶ್ ಜೈನ್, ಸುಬ್ರಹ್ಮಣ್ಯ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post