ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ #B S Yadiyurappa ಅವರ ಹುಟ್ಟುಹಬ್ಬವನ್ನು ಇಂದು ವಿವಿಧೆಡೆ ಅದ್ಧೂರಿಯಾಗಿ ಆಚರಿಸಲಾಯಿತು.
ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಲ್ಲದೇ, ಸಾಮಾಜಿಕ ಸೇವಾ ಕಾರ್ಯಗಳ ಮೂಲಕ ಜನ್ಮದಿನ ಆಚರಿಸಲಾಯಿತು.

ರವೀಂದ್ರ ನಗರದ ಶ್ರೀ ಪ್ರಸನ್ನ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಯಡಿಯೂರಪ್ಪ ರವರಿಗೆ ಶುಭಾಶಯ ಕೋರಿದರು. ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನೆರವೇರಿಸಿ ಯಡಿಯೂರಪ್ಪ ಅವರಿಗೆ ಆರೋಗ್ಯ, ಯಶಸ್ಸು ಕರುಣಿಸಲೆಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.
Also read: ಆಶ್ರಯ ಮನೆಗಳಿಗೆ ಯಾವಾಗ ಮೂಲಭೂತ ಸೌಲಭ್ಯ ಕಲ್ಪಿಸುತ್ತೀರಾ? ಕೆ.ಎಸ್. ಈಶ್ವರಪ್ಪ ಪ್ರಶ್ನೆ
ಈ ಸಂಧರ್ಭದಲ್ಲಿ ಶಾಸಕರಾದ ಡಿ.ಎಸ್.ಅರುಣ್, ಮಾಜಿ ಸೂಡಾಧ್ಯಕ್ಷ ಎನ್.ಜೆ. ನಾಗರಾಜ್, ಜ್ನಾನೇಶ್ವರ್, ಎಸ್. ದತ್ತಾತ್ರಿ, ನಗರಾಧ್ಯಕ್ಷ ಮೋಹನ್ ರೆಡ್ಡಿ, ಬಳ್ಳಕೆರೆ ಸಂತೋಷ್ ಇದ್ದರು.

ಯಡಿಯೂರಪ್ಪ ಹುಟ್ಟುಹಬ್ಬದ ಅಂಗವಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಿಸಲಾಯಿತು. ಈ ಸಂಧರ್ಭದಲ್ಲಿ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಿ.ಎಸ್.ಅರುಣ್, ಧನಂಜಯ ಸರ್ಜಿ, ಮುಖಂಡರಾದ ದಿವಾಕರ್ ಶೆಟ್ಟಿ. ರಾಜೇಶ್ ಕಾಮತ್, ಪ್ರಭಾಕರ್, ವಿಶ್ವನಾಥ್, ಸುರೇಖಾ ಮುರಳೀಧರ್, ನಾಗರಾಜ್, ಸೇರಿದಂತೆ ಹಲವರಿದ್ದರು.
ಕುಂಭಮೇಳ ಯಾತ್ರಿಕರಿಂದ ಹುಟ್ಟುಹಬ್ಬ ಆಚರಣೆ:
ಶಿವಮೊಗ್ಗದಿಂದ ಪ್ರಯಾಗ್ ರಾಜ್ ಗೆ ತೆರಳಿದ್ದ ವಿಶೇಷ ರೈಲಿನಲ್ಲಿದ್ದ ಪ್ರಯಾಣಿಕರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 81ನೇ ಹುಟ್ಟುಹಬ್ಬ ಆಚರಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಪ್ರದಾನ ಕಾರ್ಯದರ್ಶಿ ಮಾಲತೇಶ್, ಭದ್ರಾವತಿ ಬಿಜೆಪಿ ಮುಖಂಡ ಮಂಗೋಟೆ ರುದ್ರೇಶ್, ದತ್ತ ಕುಮಾರ್, ಶಿವಾನಂದ, ರಾಜೇಶ್, ಭವಾನಿ, ಯಶೋದಾ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post