ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮಾಜಿ ಶಾಸಕ ಮಧು ಬಂಗಾರಪ್ಪ ನವದೆಹಲಿಯಲ್ಲಿ ಏಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಪ್ರಸ್ತುತ ರಾಜಕಾರಣದ ಬಗ್ಗೆ ಸುದೀರ್ಘವಾಗಿ ಚರ್ಚಿಸಿದರು.
ಈ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ಹರ್ಷ ವ್ಯಕ್ತಪಡಿಸಿ, ಬಂಗಾರಪ್ಪ ಅವರು ಮಾಜಿ ಪ್ರಧಾನಿ ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧಿ ಅವರ ಓಡನಾಟವನ್ನು ಸ್ಮರಿಸಿ, ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿ ನೀಡಿದ್ದ ಜನಪ್ರಿಯ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗೂ ಪಕ್ಷ ಬಲವರ್ಧನೆ ಇನ್ನಿತರ ರಾಜಕೀಯ ವಿದ್ಯಮಾನಗಳ ಬಗ್ಗೆ ಸಲಹೆ ನೀಡಿ ಮುಂದಿನ ರಾಜಕೀಯಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post