ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾಂಗ್ರೆಸ್ ಟಿಕೇಟ್ ದೊರೆಯದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ತೆನೆ ಹಿಡಿಯಲು ಸಜ್ಜಾಗಿದ್ದು, ನಗರ ಕ್ಷೇತ್ರದಲ್ಲಿ ಜೆಡಿಎಸ್’ನಿಂದ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ.
2013ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಪ್ರಸನ್ನ ಕುಮಾರ್ 2018ರ ಚುನಾವಣೆಯಲ್ಲಿ ಸೋತಿದ್ದರು. ಈ ಬಾರಿಯೂ ಸಹ ಟಿಕೇಟ್ ದೊರೆಯುವ ನಿರೀಕ್ಷೆಯನ್ನು ಪ್ರಸನ್ನ ಕುಮಾರ್ ಹೊಂದಿದ್ದರು. ಆದರೆ, ಕಾಂಗ್ರೆಸ್’ನಿಂದ ಯೋಗೀಶ್’ಗೆ ಟಿಕೇಟ್ ನೀಡಿರುವ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಅವರು, ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತಂತೆ ಇಂದು ಮುಂಜಾನೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಪ್ರಸನ್ನಕುಮಾರ್, ಈಗಾಗಲೇ ಬಿ ಫಾರಂ ಪಡೆದಿದ್ದಾರೆ ಎಂದೂ ಸಹ ಹೇಳಲಾಗಿದೆ.
ಯಾವುದಕ್ಕೂ ಇನ್ನೂ ಅಧಿಕೃತ ಹೇಳಿಕೆ ಹೊರಬೀಳಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post