ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ: ನಗರದಲ್ಲಿ ಬಿಜೆಪಿ ಪ್ರತಿಭಟನೆ ನಂತರ ತೀವ್ರ ಹೃದಯಾಘಾತಕ್ಕೊಳಗಾಗಿ ಬಿಜೆಪಿ ಮಾಜಿ ಎಮ್‌ಎಲ್‌ಸಿ ಎಂ.ಬಿ. ಭಾನುಪ್ರಕಾಶ್ ವಿಧಿವಶರಾಗಿದ್ದಾರೆ.
ರಾಜ್ಯಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ವಿರೋಧಿಸಿ ನಗರದಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು.
ಗೋಪಿ ಸರ್ಕಲ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ್ದರು. ಅಲ್ಲಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಭಾನುಪ್ರಕಾಶ್ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ತತಕ್ಷಣವೇ ಅವರನ್ನು ಮ್ಯಾಕ್ಸ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ, ಆ
ವೇಳೆಗಾಗಲೇ ಕೊನೆಯುಸಿರೆಳೆದಿದ್ದರು.
ಭಾನುಪ್ರಕಾಶ್ ಅವರ ಮೃತದೇಹವನ್ನು ಅವರ ಸ್ವಗ್ರಾಮ ಮತ್ತೂರಿಗೆ ಕೊಂಡೊಯ್ಯಲಾಗಿದೆ.
ಜಿಲ್ಲಾ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಹಿರಿಯ ನಾಯಕರಾದ ಭಾನುಪ್ರಕಾಶ್ ಅವರ ಹಠಾತ್ ನಿಧನ ಪಕ್ಷಕ್ಕೆ ತೀವ್ರ ಆಘಾತ ಉಂಟುಮಾಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post