ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇದೇ 22ರಿಂದ ಕೋಟೆ ಮಾರಿಕಾಂಬ ಜಾತ್ರಾ Shivamogga Kote Marikamba Fair ಮಹೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಮಹತ್ವದ ಪೂರ್ವಭಾವಿ ಸಭೆ ನಡೆಸಲಾಯಿತು.
ಜಾತ್ರೆ ಸಮಿತಿ ಅಧ್ಯಕ್ಷ ಮರಿಯಪ್ಪ, ಉಪಾಧ್ಯಕ್ಷ ಎನ್. ಮಂಜುನಾಥ್, ಮೇಯರ್ ಸುನಿತಾ ಅಣ್ಣಪ್ಪ, ಪಾಲಿಕೆ ಸದಸ್ಯರ ಉಪಸ್ಥಿತಿಯಲ್ಲಿ ಸಭೆ ನಡೆದಿದ್ದು, ಜಾತ್ರೆಯ ರೂಪುರೇಷೆ, ಕೈಗೊಳ್ಳಬೇಕಾದ ಕ್ರಮಗಳು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳು, ಸ್ವಚ್ಛತೆ, ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಕುರಿತಾಗಿ ಸಭೆಯಲ್ಲಿ ಚರ್ಚಿಸಲಾಯಿತು.
Also read: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್ ಪತನ
ಪಾಲಿಕೆ ವತಿಯಿಂದ 10 ಲಕ್ಷ ರೂ.ಗಳ ಚೆಕ್ ಅನ್ನು ಮೇಯರ್ ಸುನಿತಾ ಅಣ್ಣಪ್ಪ ಅವರು ಜಾತ್ರಾ ಸಮಿತಿ ಪ್ರಮುಖರಿಗೆ ಹಸ್ತಾಂತರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post