ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಿರಿಯ ಕೇಬಲ್ ಆಪರೇಟರ್, ಭಾವಸಾರ ವಿಷನ್ ಇಂಡಿಯಾದ ಸಂಸ್ಥಾಪಕ ಅಧ್ಯಕ್ಷರಾದ ಎಂ. ಮಹಬಲೇಶ್ (76) ಅವರು ನಿಧನರಾಗಿದ್ದಾರೆ.
ಶಿವಮೊಗ್ಗದ ನಗು ಕೂಟ ಸೇರಿದಂತೆ, ವಿವಿಧ ಸಂಘ, ಸಂಸ್ಥೆಗಳಲ್ಲಿ ಸಕ್ರಿಯ ಸದಸ್ಯರಾಗಿದ್ದ ಮಹಾಬಲೇಶ್ ಅಂಬೋರೆಯವರು, ಶಿವಮೊಗ್ಗದಲ್ಲಿ ಪ್ರಪ್ರಥಮ ಬಾರಿಗೆ ಡಿಶ್ ಬುಟ್ಟಿ ಸ್ಥಾಪಿಸಿ ಮನೆಮನೆಗೆ ಕೇಬಲ್ ಸಂಪರ್ಕದ ಮೂಲಕ, ಟಿವಿ ವಾಹಿನಿ ಬಿತ್ತರಿಸಿದ್ದರು. ಕಳೆದ ಎರಡು ತಿಂಗಳಿನಿಂದ ಅನಾರೋಗ್ಯಕ್ಕೆ ಒಳಗಾಗಿದ್ದು, ಬೆಂಗಳೂರು ಮತ್ತು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಿನ್ನೆ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇವರ ಅಂತ್ಯಕ್ರಿಯೆ ನಿನ್ನೆ ನಗರದ ರೋಟರಿ ಚಿತಾಗಾರದಲ್ಲಿ ನೆರವೇರಿಸಲಾಯಿತು. ಮೃತರು, ಪತ್ನಿ, ಮೂವರು ಮಕ್ಕಳು ಸೇರಿದಂತೆ, ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post