ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಗುರುವಾರದಿಂದ ಭಾನುವಾರದ ತನಕ ಈಗ ಜಾರಿಯಲ್ಲಿರುವ ಲಾಕ್ ಡೌನ್ ಇನ್ನಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಸರ್ಕಾರದ ಮಾರ್ಗಸೂಚಿ ಪ್ರಕಾರ ದಿನಸಿ, ತರಕಾರಿ ಇತ್ಯಾದಿ ಅಗತ್ಯ ವಸ್ತುಗಳ ಮಾರಾಟಕ್ಕೆ ನಿರ್ಬಂಧವಿರುವುದಿಲ್ಲ. ಸಾರ್ವಜನಿಕರು ತಮ್ಮ ಮನೆಯ ಹತ್ತಿರವಿರುವ ಅಗತ್ಯ ವಸ್ತುಗಳ ಅಂಗಡಿಗಳಿಂದ ಈ ವಸ್ತುಗಳನ್ನು ನಿಗದಿಪಡಿಸಲಾಗಿರುವ ಅವಧಿಯಲ್ಲಿ ಖರೀದಿ ನಡೆಸಬಹುದಾಗಿದೆ.
ಈ ಅವಧಿಯಲ್ಲಿ ಕೈಗಾರಿಕಾ ಚಟುವಟಿಕೆಗಳು, ಗಾಂಧಿ ಬಜಾರ್, ಎಪಿಎಂಸಿ ಮತ್ತು ಸಗಟು ದಿನಸಿ ವ್ಯಾಪಾರವನ್ನು ಸ್ಥಗಿತಗೊಳಿಸಲು ಸಂಬಂಧಪಟ್ಟ ಸಂಘಗಳು ಮುಂದೆ ಬಂದಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಇನ್ನಷ್ಟು ಬಿಗಿಯಾಗಿ ಜಾರಿಗೊಳಿಸಲು ಸಾಧ್ಯವಾಗಲಿದೆ. ಲಾಕ್ ಡೌನ್ ಬಿಗಿಯಾಗಿ ಜಾರಿಗೊಳಿಸುವ ನಿರ್ಧಾರದ ಬಗ್ಗೆ ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗದೆ ಸಹಕರಿಸುವಂತೆ ಅವರು ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post