ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ, ಲಯನ್ಸ್ ಕ್ಲಬ್ ಹಾಗೂ ಮುಳುಗು ತಜ್ಞ ಟೀಮ್ ಈಶ್ವರ್ ಮಲ್ಪೆ ವತಿಯಿಂದ ರಾಷ್ಟ್ರೀಯ ಪ್ರೌಢಶಾಲೆಯ ಆವರಣದಲ್ಲಿ ಮೇ.10 ಮತ್ತು 11 ರಂದು ಎರಡು ದಿನಗಳ ಕಾಲ ಉಚಿತ ಕಿವಿ ಶ್ರವಣ ತಪಾಸಣೆ Ear hearing test ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಮುಳುಗು ತಜ್ಞ ಟೀಮ್ ಈಶ್ವರ್ ಮಲ್ಪೆ ವತಿಯಿಂದ ಅನೇಕ ಸಾಮಾಜಿಕ ಕಾರ್ಯವನ್ನು ನಡೆಸಿಕೊಂಡು ಬರುತ್ತಿದ್ದು, ಇದೀಗ ಶ್ರವಣದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಶಿಬಿರ ಆಯೋಜಿಸಲಾಗಿದೆ.
ಶಿಬಿರದಲ್ಲಿ ಭಾಗವಹಿಸಲು ನೊಂದಣಿ ಕಡ್ಡಾಯವಾಗಿದ್ದು, 30 ಜನರಿಗೆ ಮಾತ್ರ ಸೀಮಿತವಾಗಿದೆ. ಅಂತರಾಷ್ಟ್ರೀಯ ಸಂಸ್ಥೆಯಲ್ಲಿ ಅನುಭವ ಪಡೆದಿರುವ ವೈದ್ಯರು ಈ ಶಿಬಿರದಲ್ಲಿ ರೋಗಿಗಳ ತಪಾಸಣೆ ನಡೆಸುತ್ತಿದ್ದಾರೆ. ಇದರೊಂದಿಗೆ ಶ್ರವಣ ಯಂತ್ರಕ್ಕೆ ಅಗತ್ಯವಿರುವ ವೆಚ್ಚದ ಶೇ.40% ಮೊತ್ತವನ್ನು ಭರಿಸಲಾಗುತ್ತಿದೆ. ನೊಂದಣೆಗಾಗಿ ಮೊ.ಸಂಖ್ಯೆ: 8951804399 ಸಂಪರ್ಕಿಸಲು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ.























