ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಅಮೃತ್ ನೋನಿ ಕಂಪೆನಿಯ ವ್ಯಾಲ್ಯೂ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ವತಿಯಿಂದ ಪೊಲೀಸ್ ಸಿಬ್ಬಂದಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳನ್ನು ಉಚಿತವಾಗಿ ವಿತರಣೆ ಕಾರ್ಯಕ್ರಮಕ್ಕೆ ಕೆಎಸ್‌ಎಸ್‌ಐಡಿಸಿ ಉಪಾಧ್ಯಕ್ಷ ಎಸ್. ದತ್ತಾತ್ರಿ ಚಾಲನೆ ನೀಡಿದರು.
ನಗರದ ತುಂಗಾ ನಗರ ಪೊಲೀಸ್ ಸ್ಟೇಷನ್‌ನ ಎಸ್‌ಐ ಎಮ್.ಎಸ್. ದೀಪಕ್ ಅವರನ್ನು ಭೇಟಿ ಮಾಡಿ ಅವರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳನ್ನು ಹಸ್ತಾಂತರಿಸಲಾಯಿತು.
ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಸಮಾಜದ ಸುರಕ್ಷತೆಗಾಗಿ ಪೊಲೀಸ್ ಸಿಬ್ಬಂದಿಗಳು ಎಡೆಬಿಡದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರ ಈ ಕಾರ್ಯಕ್ಕೆ ಗೌರವ ಸಮರ್ಪಣೆಯ ರೂಪವಾಗಿ ಈ ಸೇವಾ ಕಾರ್ಯ ಮಾಡಲಾಗಿದೆ. ಹಾಗೂ ಕೊರೋನಾ ಸಂಕಷ್ಟದ ಸಮಯದ ಕೆಲಸ ಕಾರ್ಯಗಳಲ್ಲಿ ಸಿಬ್ಬಂದಿಗಳು ಸುರಕ್ಷಿತವಾಗಿ ಕರ್ತವ್ಯ ನಿಭಾಯಿಸಲಿ ಎಂದು ಎಸ್. ದತ್ತಾತ್ರಿ ಹಾರೈಸಿದರು.
ಈ ಸಂದರ್ಭದಲ್ಲಿ ಅಮೃತ್ ನೋನಿಯ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ, ಹಾಗೂ ಅವರ ಕಂಪನಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post