ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಪ್ರಸಕ್ತ ಶೈಕ್ಷಣಿಕ ಸಾಲಿನ ವಿವಿಧ ವೃತ್ತಿಪರ ಪದವಿಗಳಿಗೆ ದಾಖಲಾತಿಯನ್ನು ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸಿಇಟಿ ಪರೀಕ್ಷೆಯು ನಗರದ ಪಿಇಎಸ್ ಪಿಯುಸಿ ಪರೀಕ್ಷಾ ಕೇಂದ್ರದಲ್ಲಿ 28 ಹಾಗೂ 29ನೇ ಆಗಸ್ಟ್ 2021 ರಂದು ಜರುಗಲಿದೆ. ಪ್ರಸ್ತುತ ಪಿಇಎಸ್ ಪಿಯುಸಿ(PESPUC) ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳ 430 ಕ್ಕೂ ಅಧಿಕ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಪಿಇಎಸ್ ಪಿಯುಸಿ(PESPUC) ಸಿಇಟಿ ಪರೀಕ್ಷಾ ಕೇಂದ್ರವನ್ನು ತಲುಪಲು ಎಲ್ಲಾ ವಿದ್ಯಾರ್ಥಿಗಳಿಗೆ ನಗರದ ವಿವಿಧ ಸ್ಥಳಗಳಿಂದ ನಿಗದಿತ ಮಾರ್ಗಗಳಲ್ಲಿ ಸಂಚರಿಸುವ ಪಿಇಎಸ್ ಸಂಸ್ಥೆಯ ಬಸ್ಸುಗಳನ್ನು ಉಪಯೋಗಿಸಿಕೊಳ್ಳುವಂತೆ ಕೋರಲಾಗಿದೆ.
ಸಿಇಟಿ ಪರೀಕ್ಷೆಯ ಎರಡನೆಯ ದಿನವಾದ 29ರಂದು ಬೆಳಿಗ್ಗೆ 8 ಗಂಟೆಯ ಸಮಯದಿಂದ ಆರಂಭಗೊಂಡು ಪ್ರತಿ 20 ನಿಮಿಷಗಳ ಅಂತರದಲ್ಲಿ ಶಿವಮೊಗ್ಗ ನಗರದ ಸರ್ಕಾರಿ ಬಸ್ ನಿಲ್ದಾಣದ ಸಮೀಪವಿರುವ ಆಂಜನೇಯ ದೇವಸ್ಥಾನದಿಂದ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಇದರ ಸದುಪಯೋಗವನ್ನು ಪದವಿಪೂರ್ವ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳಲಾಗಿದೆ.
29ರಂದು ಸಂಜೆ ಪರೀಕ್ಷೆಗಳು ಮುಗಿದ ನಂತರ 4:15ಕ್ಕೆ ಪಿಇಎಸ್ಐಟಿಎಂ ಕಾಲೇಜಿನ ಮುಖ್ಯದ್ವಾರದಿಂದ ಸರ್ಕಾರಿ ಬಸ್ ನಿಲ್ದಾಣವನ್ನು ತಲುಪಲು ಸಹ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಪ್ರಸ್ತುತ ಕೊರೋನಾ ಆತಂಕದ ನಡುವೆಯೂ ಪದವಿ ಪೂರ್ವ ವಿದ್ಯಾರ್ಥಿಗಳು ತಮ್ಮ ತಮ್ಮ ಪರೀಕ್ಷಾ ಕೇಂದ್ರಗಳಿಗೆ ಸರಿಯಾದ ಸಮಯಕ್ಕೆ ತಲುಪಲು ಅನುಕೂಲವಾಗುವಂತೆ ಹಾಗೂ ಆತ್ಮವಿಶ್ವಾಸದೊಂದಿಗೆ ಸಿಇಟಿ ಪರೀಕ್ಷೆಯನ್ನು ಎದುರಿಸಲು ಸಹಕಾರಿಯಾಗುವಂತೆ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಕಾಲೇಜಿನ ವತಿಯಿಂದ ಕಲ್ಪಿಸಿರುವ ಈ ಉಚಿತ ಸಾರಿಗೆ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಕಾಲೇಜಿನ ಪ್ರಾಂಶುಪಾಲರಾದ ಎಂ. ವಿ. ಡಾ. ಚೈತನ್ಯ ಕುಮಾರ್ ಹಾಗೂ ಪಿಇಎಸ್ ಟ್ರಸ್ಟ್ ನ ಮುಖ್ಯ ಆಡಳಿತ ಸಂಯೋಜನಾಧಿಕಾರಿ ಡಾ. ಆರ್. ನಾಗರಾಜ್ ವಿನಂತಿಸಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post