ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗಣೇಶೋತ್ಸವ #Ganeshothsava ಹಾಗೂ ಈದ್ ಮಿಲಾದ್ #Eid-Milad ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಿಂದ 16ರವರೆಗೂ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ನಿಷೇಧಿಸಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಡಾ. ಗುರುದತ್ ಹೆಗಡೆ #Gurudutta Hegde ಅವರು ಆದೇಶ ಹೊರಡಿಸಿದ್ದು, ಜಿಲ್ಲೆಯಾದ್ಯಂತ ಸೆ.ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತರ, ವಿವಿಧ ದಿನಗಳಂದು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಅಲ್ಲದೇ ಸೆ.16ರಂದು ಜಿಲ್ಲೆಯಾದ್ಯಂತ ಮುಸ್ಲಿಮರು ಈದ್ ಮಿಲಾದ್ ಹಬ್ಬವನ್ನು ಆಚರಿಸಲಿದ್ದು, ಈ ಸಂಬಂಧ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಸಂದರ್ಭಗಳಲ್ಲಿ ಡಿಜೆ ಸಿಸ್ಟಂಗಳನ್ನು ನಿಷೇಧಗೊಳಿಸಬೇಕು ಎಂದು ಮಹತ್ವದ ಆದೇಶ ಹೊರಡಿಸಿದ್ದಾರೆ.
Also read: ಗುರುದೃಷ್ಟಿಯಿಂದ ಎಲ್ಲ ದೋಷ ಪರಿಹಾರ: ರಾಘವೇಶ್ವರ ಶ್ರೀ

ಇರುವುದರಿಂದ, ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತ ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆಗಳು ಪೂರ್ಣಗೊಳ್ಳುವವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ನಿಷೇಧಗೊಳಿಸಲು ಆದೇಶ ಹೊರಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post