ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆ ಈಡೇರಿಸಲು ಸರ್ಕಾರ ಒಪ್ಪಿದೆ. ಈ ಸಂಬಂಧ ರಚಿಸಲಾಗಿದ್ದ ಸಮಿತಿಯು ಮಾಡಿದ್ದ ಶಿಫಾರಸುಗಳ ಜಾರಿಗೆ ಹಣಕಾಸಿನ ಅನುಮೋದನೆ ನೀಡಲಾಗಿದ್ದು, ಅತಿಥಿ ಉಪನ್ಯಾಸಕರ ವೇತನದಲ್ಲಿ ಹೆಚ್ಚಳ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದೆ ಎಂದು ಶಾಸಕ ಡಿ. ಎಸ್. ಅರುಣ್ ಹೇಳಿದ್ದಾರೆ.
ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನದಲ್ಲಿ ಹೆಚ್ಚಳ. ಯುಜಿಸಿ ಕ್ವಾಲಿಫೈಡ್ ಹೊಂದಿದ್ದು 5 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ 32,000ರೂ. ಹಾಗೂ ಐದು ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರಿಗೆ 30,000ರೂ., ಯುಜಿಸಿ ಕ್ವಾಲಿಫೈಡ್ ಹೊಂದಿರದೇ 5 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ 28,000ರೂ., ಐದು ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರಿಗೆ 26,000ರೂ., ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್ ಗೆ ಬದಲಾಗಿ ಶೈಕ್ಷಣಿಕ ವರ್ಷಕ್ಕೆ ನೇಮಕ.
ಈ ಐತಿಹಾಸಿಕ ತೀರ್ಮಾನ ತೆಗೆದುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಾಗೂ ಸಚಿವರುಗಳಿಗೆ, ಶಾಸಕರುಗಳಿಗೆ ಹೃತ್ಪೂರ್ವಕ ಧನ್ಯವಾದಗಳು ಮತ್ತು ಈ ಉಡುಗೊರೆ ನೀಡುವುದರೊಂದಿಗೆ ಸಾವಿರಾರು ಅತಿಥಿ ಉಪನ್ಯಾಸಕರ ಬದುಕಿಗೆ ರಾಜ್ಯ ಸರ್ಕಾರ ನೆರವಾಗಿದೆ. ಎಲ್ಲ ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿಯ ಶುಭಾಶಯ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post