ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಗಣಪತಿ ಹಬ್ಬದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ವೇಳೆ ರಾಜ್ಯ ಸರ್ಕಾರ ಪ್ರಕಟಿಸಿರುವ ಕೊರೋನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಿವಮೊಗ್ಗ ವಿನೋಬನಗರ ಠಾಣೆ ಪೊಲೀಸರು ಕರಪತ್ರ ಮುದ್ರಿಸಿ ಜನಜಾಗೃತಿ ಮೂಡಿಸುವ ಕಾರ್ಯ ಆರಂಭಿಸಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಇಂದು ನಗರದ ಹೊರವಲಯ ಸೋಮಿನಕೊಪ್ಪ, ಕೆಹೆಚ್‌ಬಿ ಹಾಗೂ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಬಡಾವಣೆಗಳಲ್ಲಿ ವಿನೋಬನಗರ ಠಾಣೆ ಪೊಲೀಸರು, ಸಾರ್ವಜನಿಕ ಸ್ಥಳದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡುವ ಸಂದರ್ಭದಲ್ಲಿ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ಒಳಗೊಂಡ ಕರಪತ್ರಗಳ ವಿತರಿಸಿದರು.
ಈ ವೇಳೆ ಬೀಟ್ ಪೊಲೀಸರಾದ ಧನರಾಜ್, ಮೂರ್ತಿ ಉಪಸ್ಥಿತರಿದ್ದರು.
ಕರಪತ್ರದಲ್ಲಿರುವ ಸೂಚನೆಗಳು:
- ಕೊರೊನಾ ಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರು ಪಾಲಿಸಬೇಕು.
- ಸಾರ್ವಜನಿಕ ಸ್ಥಳದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಸ್ಥಳೀಯ ಆಡಳಿತಗಳಿಂದ ಪೂರ್ವಾನುಮತಿ ಪಡೆದುಕೊಳ್ಳಬೇಕು.
- ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಹಾಗೂ ೨೦ ಕ್ಕಿಂತ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು.
- ಸಮಿತಿಯವರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು. ಮತ್ತು ಕಾನೂನು ಸುವ್ಯವಸ್ಥೆಗೆ ಭಂಗವಾಗದಂತೆ ನೋಡಿಕೊಳ್ಳಬೇಕು.
- ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ಸೇರಿದಂತೆ ಹಲವು ಸಲಹೆ-ಸೂಚನೆಗಳನ್ನು ಪೊಲೀಸ್ ಇಲಾಖೆಯು ಕರಪತ್ರದಲ್ಲಿ ಮಾಹಿತಿ ನೀಡಿದೆ.
- ಜಿಲ್ಲಾಡಳಿತ-ಪೊಲೀಸ್ ಇಲಾಖೆಯ ನಿರ್ದೇಶನಗಳ ಪಾಲಿಸಬೇಕು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post