ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸ್ವಾತಂತ್ರ್ಯ ಹೋರಾಟಗಾರ ಗಾಂಧಿಬಸಪ್ಪ ಮತ್ತು ಹಳದಮ್ಮ ಪ್ರತಿಷ್ಠಾನದಿಂದ ಅ.2 ರಂದು ಬೆಳಗ್ಗೆ 10.30ಕ್ಕೆ ಕುವೆಂಪು ರಂಗಮಂದಿರದಲ್ಲಿ ಮಹಾತ್ಮ ಗಾಂಧೀಜಿಯರ 156 ನೇ ಜಯಂತಿ #Gandhi Jayanthi ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸಾಣೆಹಳ್ಳಿಯ ತರಳಬಾಳು ಶಾಖಾ ಮಠದ ಪಂಡಿತಾರಾಧ್ಯ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಗಾಂಧಿ ಬಸಪ್ಪ ಮತ್ತು ಹಳದಮ್ಮರ ಕುರಿತು ಎಸ್.ಬಿ.ವಾಸುದೇವ ಅವರು ಬರೆದಿರುವ ನನ್ನ ಪ್ರೀತಿಯ ಅಪ್ಪ-ಅಮ್ಮ ಕೃತಿ ಬಿಡುಗಡೆ ಮಾಡಲಾಗುವುದು. ಉಪನ್ಯಾಸಕಿ ಜ್ಯೋತಿಕುಮಾರಿ ಅವರು ಗಾಂಧೀಜಿ ಪ್ರಸ್ತುತೆ ಕುರಿತು ಮಾತನಾಡುವರು. ಡಾ.ಎನ್.ಎಲ್.ನಾಯಕ್ ಅವರಿಗೆ ವರ್ಷದ ವ್ಯಕ್ತಿ ಪುರಸ್ಕಾರ ನೀಡಲಾಗುವುದು.ಮುಖ್ಯ ಅತಿಥಿಗಳಾಗಿ ಬಸವೇಶ್ವರ ಸಮಾಜದ ಅಧ್ಯಕ್ಷ ಜ್ಯೋತಿಪ್ರಕಾಶ್ ಆಗಮಿಸುವರು. ಪ್ರತಿಷ್ಠಾನದ ಅಧ್ಯಕ್ಷ ಎಸ್.ಬಿ.ವಾಸುದೇವ ಅಧ್ಯಕ್ಷತೆ ವಹಿಸುವರು.
ಬಲಿಜ ಸಮಾಜದ ಕಾರ್ಯಕ್ರಮ“ಶಿವಮೊಗ್ಗ: ಜಿಲ್ಲಾ ಬಲಿಜ ಸಂಘದಿಂದ ಅ.5 ರಂದು ಬೆಳಗ್ಗೆ 10 ಗಂಟೆಗೆ ಯೋಗಿ ನಾರೇಯಣ ಬಲಿಜ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸಂಘದ ಸರ್ವಸದ್ಯರ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 
























