ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿ ಗಾಂಧಿ ಪ್ರತಿಮೆ ದ್ವಂಸ ಮಾಡಿದ್ದ ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಗಣೇಶ್ (24) ಹಾಗೂ ವಿನಯ್ (25) ಬಂಧಿತ ಆರೋಪಿಗಳು. ಆರೋಪಿಗಳು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಈ ಬಗ್ಗೆ ಹೊಳೆಹೊನ್ನೂರು ಠಾಣೆಯಲ್ಲಿ ಮಾಹಿತಿ ನೀಡಿದ ಎಸ್ಪಿ ಜಿ.ಕೆ. ಮಿಥುನ್ ಕುಮಾರ್, SP Mithun Kumar ಹೊಳೆಹೊನ್ನೂರು ಸರ್ಕಲ್ ನಲ್ಲಿಕಳೆದ ಆಗಸ್ಟ್ 21 ರಂದು ರಾತ್ರಿ ಗಾಂಧಿ ಪ್ರತಿಮೆ ಧ್ವಂಸ ಮಾಡಲಾಗಿತ್ತು. ನಾನು ಕೂಡ ಸ್ಥಳಕ್ಕೆ ಭೇಟಿ ಮಾಡಿ, ಪರಿಶೀಲನೆ ಮಾಡಿದ್ದೆ. ಈ ಪ್ರಕರಣದ ಪತ್ತೆಗೆ ಮೂರು ಪ್ರತ್ಯೇಕ ತಂಡ ರಚನೆ ಮಾಡಲಾಗಿತ್ತು. ಅಧಿಕಾರಿ – ಸಿಬ್ಬಂದಿ ಸೇರಿದಂತೆ ಸುಮಾರು 50 ಜನ ಸಿಬ್ಬಂದಿ ಕೆಲಸ ಮಾಡಿದ್ದಾರೆ ಎಂದರು.
Also read: ವಿಐಎಸ್‌ಎಲ್‌ಗೆ ಅಗತ್ಯ ಕಚ್ಚಾ ಸಾಮಗ್ರಿ ಪೂರೈಕೆ ಹಿನ್ನೆಲೆ: ಕಾರ್ಮಿಕರ ಸಂತಸ
ಪ್ರಕರಣದಲ್ಲಿ ಭಾಗಿಯಾಗಿದ್ದ ಚಿತ್ರದುರ್ಗ ಜಿಲ್ಲೆ ಪಂಡರಹಳ್ಳಿಯ ಇಬ್ಬರನ್ನು ಬಂಧಿಸಿದ್ದೇವೆ. ಜೊತೆಗೆ ಕೃತ್ಯಕ್ಕೆ ಬಳಸಿದ ಬೈಕ್ ನ್ನು ವಶಕ್ಕೆ ಪಡೆದಿದ್ದೇವೆ. ಚಿತ್ರದುರ್ಗದಿಂದ ಜೋಗಕ್ಕೆ ಹೋಗುವ ಮಾರ್ಗಮಧ್ಯೆ ಈ ಕೃತ್ಯ ಮಾಡಿದ್ದಾರೆ. ಪ್ರತಿಮೆ ಧ್ವಂಸಗೊಳಿಸಿ, ಶಿವಮೊಗ್ಗಕ್ಕೆ ಹೋಗಿ ಮರಳಿ ಮತ್ತೆ ಚಿತ್ರದುರ್ಗಕ್ಕೆ ಹೋಗಿದ್ದಾರೆ ಎಂದು ಮಾಹಿತಿ ನೀಡಿದರು.

ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ದ್ವಂಸ ಮಾಡಿದ ಆರೋಪಿಗಳನ್ನು ಪೊಲೀಸರು ಇದೀಗ ವಶಕ್ಕೆ ಪಡೆದಿದ್ದಾರೆ. ತನಿಖೆ ಮುಂದುವರಿದಿದೆ. ಆರೋಪಿಗಳಿಂದ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಹೇಳಿದರು.



















