ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗಣೇಶ ಮೂರ್ತಿಗಳ ವಿಸರ್ಜನೆಯ ಮೆರವಣಿಗೆಗಳು ಹಾಗೂ ಈದ್ ಮಿಲಾದ್ ಮೆರವಣಿಗೆಗಳ #Ganesha Idol – Eid Milad Procession ಬಂದೋಬಸ್ತ್ ಕರ್ತವ್ಯಕ್ಕಾಗಿ ಹೊರ ಜಿಲ್ಲೆಯಿಂದ ಶಿವಮೊಗ್ಗ ಜಿಲ್ಲೆಗೆ ಆಗಮಿಸಿರುವ ಅಧಿಕಾರಿಗಳು ತುಂಬಾ ಜವಾಬ್ದಾರಿಯಿಂದ ಬಂದೋಬಸ್ತ್ ಕರ್ತವ್ಯವನ್ನು ನಿರ್ವಹಿಸತಕ್ಕದ್ದು ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಹಿತೇಂದ್ರ ಹೇಳಿದರು.
ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ, ಶಿವಮೊಗ್ಗ ಜಿಲ್ಲಾ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಗೌರವ ವಂದನೆಗಳನ್ನು ಸ್ವೀಕರಿಸಿದ ನಂತರ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ನಿರೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಮತ್ತು ಪೊಲೀಸ್ ಉಪಾಧೀಕ್ಷಕರುಗಳೊಂದಿಗೆ ವಿಮರ್ಶನಾ ಸಭೆ ನಡೆಸಿ, ಸಭೆಯಲ್ಲಿ ಹಾಜರಿದ್ದ ಪೊಲೀಸ್ ಅಧಿಕಾರಿಗಳಿಗೆ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಈ ಕೆಳಕಂಡ ಸಲಹೆ ಸೂಚನೆಗಳನ್ನು ನೀಡಿದರು.
- ಗಣೇಶ ಮೂರ್ತಿಗಳ ವಿಸರ್ಜನೆಯ ಮೆರವಣಿಗೆಗಳು ಹಾಗೂ ಈದ್ ಮಿಲಾದ್ ಮೆರವಣಿಗೆಗಳು ಬಹಳ ಪ್ರಮುಖವಾದವುಗಳಾಗಿರುವುದರಿಂದ ತುಂಬಾ ಜವಾಬ್ದಾರಿಯಿಂದ ಬಂದೋಬಸ್ತ್ ಕರ್ತವ್ಯವನ್ನು ನಿರ್ವಹಿಸತಕ್ಕದ್ದು.
- ಈಗಾಗಲೇ 5 ದಿನಗಳ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಗಳು ಮುಕ್ತಾಯವಾಗಿದ್ದು, ಇನ್ನು ಮುಂದಿನ ದಿನ ಬಹಳ ಮುಖ್ಯವಾಗಿ ಭದ್ರಾವತಿ, ಶಿವಮೊಗ್ಗ, ರಿಪ್ಪನ್ ಪೇಟೆ, ಸಾಗರದ ಹಿಂದೂ ಮಹಾಸಭಾ ಗಣಪತಿಗಳ ವಿಸರ್ಜನಾ ಬಂದೋಬಸ್ತ್ ಕರ್ತವ್ಯವನ್ನು ಬಹಳ ಎಚ್ಚರಿಕೆಯಿಂದ ಮಾಡತಕ್ಕದ್ದು.
- ಶಿವಮೊಗ್ಗ ಜಿಲ್ಲೆಯ (ಸ್ಥಳೀಯ) ಅಧಿಕಾರಿಗಳು ಮುಂಬರುವ ಎಲ್ಲಾ ಗಣೇಶ ಮತ್ತು ಈದ್ ಮಿಲಾದ್ ಮೆರವಣಿಗೆಗಳ ಬಂದೋಬಸ್ತ್ ಕರ್ತವ್ಯವನ್ನು ಬಹಳ ಎಚ್ಚರಿಕೆಯಿಂದ ನಿರ್ವಹಿಸತಕ್ಕದ್ದು.
- ಗಣೇಶ ಮತ್ತು ಈದ್ ಮಿಲಾದ್ ಮೆರವಣಿಗೆಗಳ ಬಂದೋಬಸ್ತ್ ಕರ್ತವ್ಯಕ್ಕಾಗಿ ನಿಯೋಜನೆಗೊಂಡ ಎಲ್ಲಾ ಅಧಿಕಾರಿಗಳು ತಮಗೆ ನೇಮಕವಾದ ಸೆಕ್ಟರ್ ನಲ್ಲಿಯೇ ಇದ್ದು, ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಜವಾಬ್ದಾರಿಯಿಂದ ಬಂದೋಬಸ್ತ್ ಕರ್ತವ್ಯವನ್ನು ನಿರ್ವಹಿಸುವುದು.
- ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕರ್ತವ್ಯವನ್ನು ನಿರ್ವಹಿಸುವುದು.
- ಗಣಪತಿ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಮತ್ತು ಈದ್ ಮಿಲಾದ್ ಮೆರವಣಿಗೆಗಳ ಸಂದರ್ಭದಲ್ಲಿ ರಸ್ತೆಯ ಎರಡೂ ಕಡೆ ತೀವ್ರ ನಿಗಾವಣೆ ವಹಿಸಿ ಬೈಲೈನ್ ಪೆಟ್ರೋಲಿಂಗ್ ಕರ್ತವ್ಯವನ್ನು ಹೆಚ್ಚಾಗಿ ನಿರ್ವಹಿಸುವುದು.
- ಗಣಪತಿ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಮತ್ತು ಈದ್ ಮಿಲಾದ್ ಮೆರವಣಿಗೆಗಳಲ್ಲಿ ಘೋಷಣೆಗಳನ್ನು ಕೂಗುವವರ ವಿರುದ್ಧ ಅತ್ಯಂತ ಹೆಚ್ಚಿನ ನಿಗಾವಹಿಸಿ ಬಂದೋಬಸ್ತ್ ಕರ್ತವ್ಯವನ್ನು ನಿರ್ವಹಿಸತಕ್ಕದ್ದು.
- ಗಣಪತಿ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಮತ್ತು ಈದ್ ಮಿಲಾದ್ ಮೆರವಣಿಗೆಗಳಲ್ಲಿ ಅತೀ ಮುಖ್ಯವಾದ ಸ್ಥಳಗಳಲ್ಲಿ ಡ್ರೋನ್ ಕ್ಯಾಮೆರಾಗಳನ್ನು ಬಳಸಿಕೊಂಡು ಎಲ್ಲಾ ದೃಶ್ಯಗಳು ಬರುವಂತೆ ನೋಡಿಕೊಳ್ಳುವುದು.
- ಸರ್ವೋಚ್ಛ ನ್ಯಾಯಾಲಯದ ಆದೇಶದ ರೀತ್ಯಾ ಎರಡೂ ಹಬ್ಬಗಳ ಮೆರವಣಿಗೆಗಳಲ್ಲಿ 75 ಡೆಸಿಬಲ್ ಗಿಂತ ಹೆಚ್ಚಿಗೆ ಶಬ್ದವನ್ನುಂಟು ಮಾಡುವವರ ವಿರುದ್ಧ ನಿಯಮಾನುಸಾರ ಕ್ರಮ ತೆಗೆದುಕೊಳ್ಳುವುದು.
- ಶಿವಮೊಗ್ಗ ನಗರ ಹಾಗೂ ತಾಲ್ಲೂಕುಗಳಲ್ಲಿ ಅತೀ ಮುಖ್ಯವಾದ ಗಣಪತಿ ವಿಸರ್ಜನಾ ಮೆರವಣಿಗೆ ಮತ್ತು ಬಂದೋಬಸ್ತ್ ಕರ್ತವ್ಯದ ಸಮಯದಲ್ಲಿ ಉಸ್ತುವಾರಿ ಅಧಿಕಾರಿಗಳು ತಮ್ಮ ತಮ್ಮ ಸೆಕ್ಟರ್ ನಲ್ಲಿಯೇ ಹಾಜರಿದ್ದು, ಅತೀ ಜವಾಬ್ದಾರಿಯಿಂದ ಕರ್ತವ್ಯವನ್ನು ನಿರ್ವಹಿಸತಕ್ಕದ್ದು.
ಈ ಸಂದರ್ಭದಲ್ಲಿ ಡಾ. ರವಿಕಾಂತೇ ಗೌಡ, ಐಪಿಎಸ್, ಮಾನ್ಯ ಐಜಿಪಿ ಪೂರ್ವ ವಲಯ ದಾವಣಗೆರೆ, ಮಿಥುನ್ ಕುಮಾರ್ ಜಿ. ಕೆ, ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಮುತ್ತುರಾಜ್ ಐಪಿಎಸ್, ಬಿ ಎಂ ಟಿ ಎಫ್, ಪೊಲೀಸ್ ಅಧೀಕ್ಷಕರು, ರಾಜೀವ್ ಐಪಿಎಸ್ ಐಎಸ್ ಡಿ, ಹುಬ್ಬಳ್ಳಿ, ಶ್ರೀ ಕಾರಿಯಪ್ಪ ಎ ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಎಸ್ ರಮೇಶ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಉಪಾಧೀಕ್ಷಕರು, ಎಲ್ಲಾ ಪೊಲೀಸ್ ನಿರೀಕ್ಷಕರು, ಹಾಗೂ ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಬಂದೋಬಸ್ತ್ ಸಂಬಂಧ ಶಿವಮೊಗ್ಗ ಜಿಲ್ಲೆಗೆ ಹೊರ ಜಿಲ್ಲೆಗಳಿಂದ ಮತ್ತು ಇತರೆ ಘಟಕಗಳಿಂದ ಬಂದಂತಹ ಪೊಲೀಸ್ ಅಧಿಕಾರಿಗಳು ಸಹ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post