No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಡಿಮೆ ಶುಲ್ಕದಲ್ಲಿ ಹೈಟೆಕ್ ಶಿಕ್ಷಣಕ್ಕಾಗಿ ಗಂಗೋತ್ರಿ ಪಿಯು ಕಾಲೇಜು ಆರಂಭ: ಹೆಚ್.ಎಸ್. ಸುಂದರೇಶ್

kalpa News by kalpa News
May 16, 2026
in ಶಿವಮೊಗ್ಗ
1
ಕಡಿಮೆ ಶುಲ್ಕದಲ್ಲಿ ಹೈಟೆಕ್ ಶಿಕ್ಷಣಕ್ಕಾಗಿ ಗಂಗೋತ್ರಿ ಪಿಯು ಕಾಲೇಜು ಆರಂಭ: ಹೆಚ್.ಎಸ್. ಸುಂದರೇಶ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಬಡ, ಮಧ್ಯಮ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಹೈಟೆಕ್ ಶಿಕ್ಷಣ ನೀಡುವ ಉದ್ದೇಶದಿಂದ ತಮ್ಮ ಕಾಲೇಜನ್ನು ಆರಂಭಿಸಲಾಗಿದೆ ಎಂದು ಗಂಗೋತ್ರಿ ಸ್ವತಂತ್ರ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಯ ಹಾಗೂ ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ತಿಳಿಸಿದರು.

ನಗರದ ಕೋಟೆ ರಸ್ತೆಯಲ್ಲಿರುವ ತಮ್ಮ ಕಾಲೇಜಿನಲ್ಲಿ ಬಿಕಾಂ ಮತ್ತು ಪಿಯು ವಿಜ್ಞಾನ ಶಿಕ್ಷಣ ಕಲಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಪಡೆಯುವ ವಿದ್ಯಾರ್ಥಿಗಳಿಗೆ ಜುಲೈ ಮೊದಲನೇ ವಾರದಿಂದ 10 ತಿಂಗಳ ನೀಟ್ ಮತ್ತು ಜೆಇಇ ಪ್ರವೇಶ ಪರೀಕ್ಷೆಗೆ ತರಬೇತಿಯನ್ನು ಆರಂಭಿಸಲಾಗುವುದು. ಕಾಲೇಜಿನಲ್ಲಿ ಐಐಟಿ ಮೊದಲಾದ ಉನ್ನತ ಶಿಕ್ಷಣ ಸಂಸ್ಥೆಗಳಿಂದ ಪದವಿ ಪಡೆದು ಬಂದ ಹಿರಿಯ ಉಪನ್ಯಾಸಕರು ತರಬೇತಿ ನೀಡಲಿದ್ದು, ಫಲಿತಾಂಶ ಆಧಾರಿತ ತರಬೇತಿಯನ್ನು ಒಳಗೊಂಡಿರುತ್ತದೆ ಎಂದರು.
ತಮ್ಮ ನೇತೃತ್ವದಲ್ಲಿ ನೂತನ ಆಡಳಿತ ಮಂಡಳಿ ಆಸ್ತಿತ್ವಕ್ಕೆ ಬಂದ ಅನಂತರದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ತರಗತಿ ಹಕೊಠಡಿಗಳಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಆಳವಡಿಸಿಕೊಳ್ಳಲಾಗಿದೆ. ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳೆರಡರಲ್ಲೂ ಹೆಚ್ಚಿನ ಅಧ್ಯಯನ ಕೈಗೊಳ್ಳಲು ಅನುಕೂಲವಾಗುವಂತೆ ಡಿಜಿಟಲ್ ಬೋರ್ಡ್‍ಗಳನ್ನು ಅಳವಡಿಸಲಾಗಿದ್ದು, ಈ ಬೋರ್ಡ್‍ಗಳ ಮೂಲಕವಾಗಿ ಮುದ್ರಿತ ಪಠ್ಯ ಹಾಗೂ ಸಚಿತ್ರವಾದ ಅಧ್ಯಯನವನ್ನು ಮಾಡಲು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು, ಪ್ರತಿ ತರಗತಿಯ ಕೊಠಡಿಯನ್ನು ಹವಾನಿಯಂತ್ರಿತ ಹೈಟೆಕ್ ವ್ಯವಸ್ಥೆಗೆ ಮೇಲ್ದರ್ಜೆಗೆರಿಸಲಾಗಿದೆ. ಇಲ್ಲಿನ ಪ್ರತಿ ವಿದ್ಯಾರ್ಥಿಗೂ ಪ್ರತಿ ದಿನವೂ ತರಗತಿಯ ಸಂದರ್ಭದಲ್ಲಿ ಹೆಚ್ಚಿನ ಓದಿನ ವಾತಾವರಣವನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಕಾಲೇಜಿನಲ್ಲಿ ನೀಟ್ ಹಾಗೂ ಜೆಇಇ ತರಬೇತಿ ನೀಡಲು ರಾಜಸ್ತಾನ, ಮಹಾರಾಷ್ಟ್ರ, ಇಂಧೋರ್ ಹಾಗೂ ಕೇರಳದ ಹಿರಿಯ ಐಐಟಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇದರ ಜೊತೆಗೆ ರಾಜ್ಯದವರೇ ಆದ ನಾಲ್ವರು ಹಿರಿಯ ಉಪನ್ಯಾಸಕರನ್ನೂ ಸಹ ನೇಮಕ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ ಅವರು, ಗಂಗೋತ್ರಿ ಪದವಿ ಪೂರ್ವ ಕಾಲೇಜಿನಲ್ಲಿ ನಗರದ ವಿವಿಧ ಭಾಗಗಳಿಂದ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಮಧ್ಯಾಹ್ನ ಊಟದ ವ್ಯವಸ್ಥೆ ಹಾಗೂ ಸಂಜೆಯ ಉಪಹಾರಕ್ಕೆ ಅನುಕೂಲವಾಗಲೆಂದು ಕ್ಯಾಂಟಿನ್ ವ್ಯವಸ್ಥೆಯನ್ನೂ ಮಾಡಲಾಗಿದೆ. ಅಲ್ಲದೆ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.
ಮೆಡಿಕಲ್ ಹಾಗೂ ಎಂಜನಿಯರಿಂಗ್ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳನ್ನು ಎದುರಿಸಲು ಸಿದ್ಧರಾಗುವ ವಿದ್ಯಾರ್ಥಿಗಳಿಗೆ ಎಲ್ಲ ರೀತಿಯಿಂದಲೂ ನೆರವು ನೀಡಲು ಉಪನ್ಯಾಸಕರಿಂದ ಸೂಕ್ತ ತರಬೇತಿಯ ನೆರವು ಕೊಡಿಸಲು ಸಿದ್ಧರಾಗಿದ್ದೇವೆ. ಸಾಮಾಜಿಕ ನ್ಯಾಯ ಹಾಗೂ ಮಧ್ಯಮ ಮತ್ತು ಕೆಳವರ್ಗವದರ ಆದಾಯವನ್ನು ಗಮನದಲ್ಲಿಟ್ಟುಕೊಂಡು ಪ್ರಥಮ ಪಿಯು ಪ್ರವೇಶವನ್ನು ನೀಡಲಾಗಿದೆ. ಸುಮಾರು 60ಕ್ಕೂ ಹೆಚ್ಚು ಪ್ರತಿಭಾವಂತ ಮಕ್ಕಳಿಗೆ ಅತಿ ಕಡಿಮೆ ದರದಲ್ಲಿ ಶುಲ್ಕವನ್ನು ತೆಗೆದುಕೊಳ್ಳಲಾಗಿದೆ ಎಂದ ಅವರು, ಯಾರು ಈಗಾಗಲೇ ನೀಟ್ ಪ್ರವೇಶ ಪರೀಕ್ಷೆಯನ್ನು ಹಾಜರಾಗಿ ಉತ್ತಮ ರ್ಯಾಂಕ್ ಪಡೆಯಲು ಸಾಧ್ಯವಾಗಿಲ್ಲವೋ ಅಂತಹ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ನೀಡಲಾಗುತ್ತದೆ. ಪ್ರತಿ ತಿಂಗಳ ಫಲಿತಾಂಶ ಆಧಾರದಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ಮಟ್ಟವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ಕಾರ್ಯಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಈ ಹತ್ತು ತಿಂಗಳ ಅವಧಿಯ ತರಬೇತಿಯಲ್ಲಿ ಪ್ರಥಮ ಪಿಯು ಹಾಗೂ ದ್ವೀತಿಯ ಪಿಯು ಪಠ್ಯದ ಸಂಪೂರ್ಣ ಮನವರಿಕೆ ಹಾಗೂ ಪರೀಕ್ಷೆಯ ದೃಷ್ಟಿಯಲ್ಲಿ ಹೇಗೆ ಸಿದ್ಧರಾಗಬೇಕು ಎಂಬ ಸಿದ್ಧತೆಯನ್ನು ಹೇಳಿಕೊಡಲಾಗುತ್ತದೆ. ಹಾಗೆಯೇ ಪ್ರತಿ ವಾರದ ಪರೀಕ್ಷೆಗಳು, ತಿಂಗಳ ಪರೀಕ್ಷೆ ಮತ್ತು ಅಂತಿಮ ದಿನಗಳಲ್ಲಿ ವಿದ್ಯಾರ್ಥಿಗಳ ಕಾರ್ಯಕ್ಷಮತೆಯ ಪರೀಕ್ಷೆ ಮಾಡಲು ನೀಟ್ ಮಾದರಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಎಲ್ಲ ಪಠ್ಯ ಹಾಗೂ ಪರೀಕ್ಷೆಗಳ ಜವಾಬ್ದಾರಿಯನ್ನು ನಮ್ಮ ಕಾಲೇಜಿನ ಹಿರಿಯ ಉಪನ್ಯಾಸಕರೇ ನಿರ್ವಹಿಸಲಿದ್ದಾರೆ. ಇನ್ನು ಡಿಸೆಂಬರ್ ಹಾಗೂ ಜನವರಿಯಲ್ಲಿ ನಡೆಯಲಿರುವ ಜೆಇಇ ಮುಖ್ಯ ಪರೀಕ್ಷೆಗೂ ಆರು ತಿಂಗಳ ತರಬೇತಿಯನ್ನು ಏರ್ಪಡಿಸಲಾಗಿದ್ದು, ಅತ್ಯಂತ ಕಠಿಣವಾಗಿರುವ ಈ ಪರೀಕ್ಷೆಯನ್ನು ಎದುರಿಸಲು ಬೇಕಾದ ಸಿದ್ಧತೆಯನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡುವ ಹಾಗೂ ಅತ್ಯಂತ ಕಠಿಣವಾದ ಪರೀಕ್ಷೆಯನ್ನು ಹೇಗೆ ಎದುರಿಸಬೇಕು ಎಂಬ ಮನೋಸ್ಥೈರ್ಯವನ್ನು ಬೆಳಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಈ ತರಬೇತಿಯಲ್ಲಿ ನೀಟ್ ಪರೀಕ್ಷೆಗೆ ನೀಡಲಾಗುವಂತೆ ವಾರದ, ತಿಂಗಳ ಹಾಗೂ ಅಂತಿಮ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಈ ಎರಡೂ ಪರೀಕ್ಷೆಗಳಿಗೆ ಪ್ರತ್ಯೇಕ ತರಬೇತಿಯನ್ನು ನೀಡಲಾಗುತ್ತಿದ್ದು, ಎನ್‍ಐಟಿ ಹಾಗೂ ಐಐಟಿ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಈಗಾಗಲೇ ಪರೀಕ್ಷೆ ತೆಗದುಕೊಂಡು ಯಾವುದೇ ರ್ಯಾಂಕ್ ಪಡೆಯಲು ಸಾಧ್ಯವಾಗದೇ ಇರುವ ವಿದ್ಯಾರ್ಥಿಗಳಿಗೆ ಪ್ರವೇಶ ಅವಕಾಶವನ್ನು ನೀಡಲಾಗುತ್ತಿದೆ. ಜುಲೈ ಮೊದಲವಾರದಿಂದಲೇ ಈ ಎರಡೂ ಪ್ರವೇಶ ಪರೀಕ್ಷೆಯ ತರಬೇತಿ ಆರಂಭವಾಗಲಿದ್ದು, ತರಬೇತಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆಯನ್ನು ಮಾಡಲಾಗಿದೆ.

ಸುದ್ದಿಗೋಷ್ಟಿಯಲ್ಲಿ ಕಾಲೇಜಿನ ಪ್ರಾಂಶುಪಾಲ ರೇಣುಕಾರಾಧ್ಯ, ಐಐಟಿ ನುರಿತ ಹಿರಿಯ ಉಪನ್ಯಾಸಕರು, ಸಂಸ್ಥೆಯ ಖಚಾಂಚಿ ದಿನೇಶ್‍ಪಟೇಲ್, ನಿರ್ದೇಶಕರಾದ ಸುಬ್ರಮಣ್ಯಸ್ವಾಮಿ ಹಾಗೂ ಕಾರ್ಯದರ್ಶಿ ಜಗದೀಶ ಮತ್ತು ಆಡಳಿತಾಧಿಕಾರಿ ರೂಪ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಸೃಜನಶೀಲತೆಯೇ ಯಶಸ್ವಿ ಇಂಜಿನಿಯರ್‌ನ ನಿಜವಾದ ಗುರುತು: ಎನ್‌ಇಎಸ್ ಕಾರ್ಯದರ್ಶಿ ನಾಗರಾಜ

Next Post

ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

kalpa News

kalpa News

Next Post
ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

Comments 1

  1. Pingback: ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ » kalpa.news

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL