ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭದ್ರಾವತಿ ಮೂಲೆಗಟ್ಟಿ ಹೆಲಿಪ್ಯಾಡ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಬಂಧಿಸಲಾಗಿದ್ದ ಇಬ್ಬರಿಗೆ ಪ್ರಧಾನ ಸಿಜೆ ಜೆಎಂಎಫ್‌ಸಿ ನ್ಯಾಯಾಲಯ ಆರು ತಿಂಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಭದ್ರಾವತಿ ಬೊಮ್ಮನಕಟ್ಟೆಯ ಇಮ್ರಾನ್ ಪಾಷಾ (22) ಮತ್ತು ಸೈಯದ್ ರೋಷನ್ (38) ಶಿಕ್ಷೆಗೆ ಒಳಗಾದವರು. ಇಬ್ಬರೂ 2020ರ ಸೆಪ್ಟೆಂಬರ್ 27ರಂದು ಮೂಲಿಕಟ್ಟೆ ಹೆಲಿಪ್ಯಾಡ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇವರನ್ನು ಭದ್ರಾವತಿ ಗ್ರಾಮಾಂತರ ನಿರೀಕ್ಷಕ ಇ. ಮಂಜುನಾಥ ಬಂಧಿಸಿ ಆರು ಸಾವಿರ ರೂ. ಮೌಲ್ಯದ 190 ಗ್ರಾಂ ಒಣ ಗಾಂಜಾ ಜಪ್ತಿ ಮಾಡಿದ್ದರು.
ತನಿಖಾಧಿಕಾರಿಯಾಗಿದ್ದ ಭದ್ರಾವತಿ ಪೇಪರ್ ಟೌನ್ ಠಾಣೆ ಪಿಎಸ್‌ಐ ಶಿಲ್ಪಾ ನಾಯನೇಗಲಿ ಅವರು ನ್ಯಾಯಾಲಯಕ್ಕೆ ದೋಷಾರೋಷಣ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ಗುರುವಾರ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ್ದು ಆರೋಪ ಸಾಬೀತಾಗಿದ್ದರಿಂದ ನ್ಯಾಯಾಧೀಶ ಆರ್. ಯತೀಶ್ ಅವರು ಇಬ್ಬರಿಗೂ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಬಿ.ಎಚ್.ರಂಗಪ್ಪ ಅವರು ವಾದ ಮಂಡಿಸಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















