ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗೀತಾ ಶಿವರಾಜ್ ಕುಮಾರ್ ಅವರಿಗೆ ಒಂದು ಅವಕಾಶವನ್ನು ನೀಡಬೇಕು ಎಂದು ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು #Sa Ra Govind ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗೀತಾ ಶಿವರಾಜ್ ಕುಮಾರ್ ಅವರು ಈ ನಾಡಿನ ಅಪರೂಪದ ರಾಜಕಾರಣಿ. ಮಾಜಿ ಮುಖ್ಯಮಂತ್ರಿ ದಿ. ಬಂಗಾರಪ್ಪನವರ #Bangarappa ಮಗಳು. ಜೊತೆಗೆ ಖ್ಯಾತ ನಟ ಶಿವರಾಜ್ ಕುಮಾರ್ #Shivarajkumar ಅವರ ಪತ್ನಿಯಾಗಿದ್ದಾರೆ. ಅವರಿಗೊಂದು ಅವಕಾಶ ಕೊಡಬೇಕಾಗಿದೆ. ಹಾಗಾಗಿ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು, ನಿರ್ದೇಶಕರ ಸಂಘ, ನಿರ್ಮಾಪಕರ ಸಂಘ, ಕಲಾವಿದರ ಸಂಘ ಹಾಗೂ ಹಲವು ನಟ, ನಟಿಯರು ಗೀತಾ ಶಿವರಾಜ್ ಕುಮಾರ್ #Geetha ಅವರ ಪರವಾಗಿ ಮತ ಕೇಳಲು ಬಂದಿದ್ದೇವೆ. ಅವರಿಗೊಂದು ಅವಕಾಶ ಕೊಡಬೇಕು ಎಂದರು.
Also read: ಪ್ರಜ್ವಲ್ ಪ್ರಕರಣ | ಕೇಂದ್ರ ಗೃಹ ಸಚಿವ ಅಮಿತ್ ಶಾ ಫಸ್ಟ್ ರಿಯಾಕ್ಷನ್ ಹೇಗಿದೆ ನೋಡಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post