ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಗೆ #Lok Sabha Election ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar ಅವರು ಒಂದೇ ದಿನ ಎರಡು ನಾಮಪತ್ರ ಸಲ್ಲಿಸಿದ್ದಾರೆ.
ಇಂದು ಮುಂಜಾನೆ ರಾಮಣ್ಣ ಶ್ರೇಷ್ಠಿ ಪಾರ್ಕ್’ನಿಂದ ಅದ್ದೂರಿ ಮೆರವಣಿಗೆಯಲ್ಲಿ ಅಪಾರ ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮೊದಲ ನಾಮಪತ್ರ ಸಲ್ಲಿಸಿದರು.
ಮೊದಲ ಬಾರಿ ಸಲ್ಲಿಸಿದಾಗ ತಮ್ಮ ಪತಿ ಶಿವರಾಜಕುಮಾರ್, ಶಾಸಕರಾದ ಬಿ.ಕೆ. ಸಂಗಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಇದ್ದರು.
Also read: ಮೆರವಣಿಗೆ ವೇಳೆ ಎಲ್ ಇಡಿ ಸ್ಕ್ರೀನ್ ಬಿದ್ದು ಗಾಯ: ಆಸ್ಪತ್ರೆಗೆ ಸಚಿವರ ಭೇಟಿ
ಮಧ್ಯಾಹ್ನದ ವೇಳೆಗೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ #D K Shivkumar ಅವರು ನಗರಕ್ಕೆ ಆಗಮಿಸಿದರು. ಈ ಹಿನ್ನೆಲೆಯಲ್ಲಿ ಅವರೊಂದಿಗೆ ತೆರಳಿ ಎರಡನೇ ನಾಮಪತ್ರವನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಸಲ್ಲಿಸಿದರು.
ಎರಡನೇ ಬಾರಿ ನಾಮಪತ್ರ ಸಲ್ಲಿಕೆ ಮಾಡುವಾಗ ಗೀತಾ ಶಿವರಾಜಕುಮಾರ್ ಅವರೊಂದಿಗೆ ಡಿ.ಕೆ. ಶಿವಕುಮಾರ್, ಶಾಸಕರಾದ ಬಿ.ಕೆ. ಸಂಗಮೇಶ್ವರ್, ಬೇಳೂರು ಗೋಪಾಲಕೃಷ್ಣ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಇದ್ದರು.
ಒಬ್ಬ ಅಭ್ಯರ್ಥಿ ನಾಲ್ಕು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post