ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾ ಕಾಂಗ್ರೆಸ್ ಚುನಾವಣೆಯನ್ನು ಎದುರಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದು, ನಾಳೆ ಅಭ್ಯರ್ಥಿ ಗೀತಾ ಶಿವರಾಜ್‍ಕುಮಾರ್ Geetha Shivarajkumar ಅವರನ್ನು ಶಿವಮೊಗ್ಗಕ್ಕೆ ಅತ್ಯಂತ ಸಂಭ್ರಮ ಸಡಗರದಿಂದ ಬರಮಾಡಿಕೊಳ್ಳುತ್ತಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೀತಾ ಶಿವರಾಜ್‍ಕುಮಾರ್ ಅವರು ನಾಳೆ ಬೆಳಿಗ್ಗೆ 10.30ಕ್ಕೆ ಭದ್ರಾವತಿಯ ಬಾರಂದೂರಿಗೆ ಬರುತ್ತಾರೆ. ಅಲ್ಲಿ ಅವರನ್ನು ಅತ್ಯಂತ ಸಂಭ್ರಮದಿಂದ ಸ್ವಾಗತಿಸಲಾಗುತ್ತದೆ. ನಂತರ ಅವರು ಶಿವಮೊಗ್ಗದ ಎಂಆರ್‍ಎಸ್ ಸರ್ಕಲ್‍ಗೆ ಬರುತ್ತಾರೆ ಅಲ್ಲಿಂದ ಅವರನ್ನು ಬೃಹತ್ ರ್ಯಾಲಿಯೊಂದಿಗೆ ಲಗಾನ್ ಕಲ್ಯಾಣ ಮಂದಿರಕ್ಕೆ ಕರೆತರಲಾಗುವುದು. ಈ ರ್ಯಾಲಿಯಲ್ಲಿ ನಟ ಶಿವರಾಜ್‍ಕುಮಾರ್ ಹಾಗೂ ಕಾಂಗ್ರೆಸ್ ಎಲ್ಲಾ ಮುಖಂಡರು ಇರುತ್ತಾರೆ ಎಂದರು.
ಲಗಾನ್ ಕಲ್ಯಾಣ ಮಂದಿರದಲ್ಲಿ ಬೆಳಿಗ್ಗೆ 11.30ಕ್ಕೆ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ಸಚಿವ ಮಧುಬಂಗಾರಪ್ಪ, Minister Madhu Bangarappa ಶಾಸಕರಾದ ಸಂಗಮೇಶ್, ಗೋಪಾಲಕೃಷ್ಣ ಬೇಳೂರು ಸೇರಿದಂತೆ ಜಿಲ್ಲೆಯ ಎಲ್ಲಾ ಮುಖಂಡರು, ಜಿಲ್ಲಾ ಮಟ್ಟದ ಕಾರ್ಯಕರ್ತರು, ವಿವಿಧ ಘಟಕಗಳ ಮುಖ್ಯಸ್ಥರು, ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು ಭಾಗವಹಿಸುತ್ತಾರೆ ಎಂದರು.
Also read: ಬಿಜೆಪಿಯೊಂದಿಗೆ ಮೈತ್ರಿಗೆ ಕಾಂಗ್ರೆಸ್ ಪಕ್ಷವೇ ಕಾರಣ | ಕುಮಾರಸ್ವಾಮಿ ಹೀಗೆ ಹೇಳಿದ್ದೇಕೆ?
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರ್ಕಾರವಾಗಿದೆ. ಜನರ ಆಶೋತ್ತರಗಳಿಗೆ ಸದಾ ಸ್ಪಂಧಿಸುತ್ತ ಬಂದಿದೆ. ಗ್ಯಾರಂಟಿಗಳ ಬಲ ನಮಗಿದೆ. ಪ್ರಧಾನಿ ಮೋದಿಯವರ ಗ್ಯಾರಂಟಿಗಳು ಸುಳ್ಳು ಎಂದು ಜನಕ್ಕೆ ಗೊತ್ತಾಗಿದೆ. ಹಾಗಾಗಿ ಇದು ಸುಳ್ಳು ಮತ್ತು ಸತ್ಯದ ನಡುವಿನ ಚುನಾವಣೆಯಾಗಿದೆ ಎಂದರು.
ಪ್ರಧಾನಿ ಮೋದಿಯವರು PM Modi ಕಾಂಗ್ರೆಸ್ ಪಕ್ಷದಲ್ಲಿ ಭ್ರಷ್ಟಚಾರವಿದೆ ಎನ್ನುತ್ತಾರೆ. ಆದರೆ, ಸುಪ್ರೀಂ ಕೋರ್ಟ್ ಮೋದಿ ಸರ್ಕಾರಕ್ಕೆ ಚುನಾವಣಾ ಬಾಂಡ್‍ಗೆ ಸಂಬಂಧಿಸಿದಂತೆ ಕಪಾಳ ಮೋಕ್ಷ ಮಾಡಿರುವುದನ್ನು ಮರೆತ್ತಿದ್ದಾರೆ. ಎಸ್‍ಬಿಐ ಚುನವಣಾ ಬಾಂಡಿನ ವಿವರವನ್ನು ಕೂಡಲೇ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಈಗಾಗಲೇ ತರಾಟೆ ತೆಗೆದುಕೊಂಡಿದೆ. ಕಳ್ಳರು ಕೊಟ್ಟ ಕೋಟ್ಯಾಂತರ ಹಣ ಚುನಾವಣಾ ಬಾಂಡ್ ಆಗಿದೆ. ಯಾವ ನೈತಿಕತೆಯ ಮೇಲೆ ಮೋದಿಯವರು ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಾರೆ. ಹಾಗಾಗಿ ಮೋದಿ ಹವಾಗಿವಾ ಏನು ಇಲ್ಲ ಎಂದರು.
ಗೀತಾ ಶಿವರಾಜ್‍ಕುಮಾರ್ ಈ ಬಾರಿ ಗೆದ್ದೆಗೆಲ್ಲುತ್ತಾರೆ ಬಿಜೆಪಿಯ ಭಿನ್ನಮತ ಇದಕ್ಕೆ ಸಹಕಾರ ನೀಡಲಿದೆ. ಒಂದು ಪಕ್ಷ ಕೆ.ಎಸ್.ಈಶ್ವರಪ್ಪನವರು ಸ್ವತಂತ್ರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ನಿಂತರೆ ಅದು ಕಾಂಗ್ರೆಸ್ ಪಕ್ಷಕ್ಕೆ ಬಹುದೊಡ್ಡ ಕೊಡುಗೆಯಾಗಲಿದೆ. ಅದೇನೆಯಿದ್ದರು ಈ ಬಾರಿ ನಾವು ಗೆದ್ದೇ ಗೆಲ್ಲುತ್ತೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಆಯನೂರು ಮಂಜುನಾಥ್, ಆರ್.ಪ್ರಸನ್ನಕುಮಾರ್, ಕಲಗೋಡು ರತ್ನಾಕರ್, ಎಸ್.ಟಿ. ಚಂದ್ರಶೇಖರ್, ಚಂದ್ರಭೂಪಾಲ್, ರಮೇಶ್ ಶಂಕರಘಟ್ಟ, ಹೆಚ್.ಸಿ.ಯೋಗೀಶ್, ಮಂಜುನಾಥ್ ಬಾಬು, ಜಿ.ಡಿ.ಮಂಜುನಾಥ್, ಚಂದನ್, ಎನ್.ಡಿ. ಪ್ರವೀಣ್‍ಕುಮಾರ್, ಜಿ.ಪದ್ಮನಾಭ್, ಶಿ.ಜು. ಪಾಶ ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post