No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸ್ವಸಹಾಯ ಘಟಕಗಳನ್ನು ಸ್ಥಾಪಿಸಲು ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮಹಿಳೆಯರು ಮುಂದೆ ಬರಬೇಕು

ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶಶಿಕಲಾ ವಿ.ಟೆಂಗಳಿ ಕರೆ

kalpa News by kalpa News
June 30, 2021
in ಶಿವಮೊಗ್ಗ
0
ಸ್ವಸಹಾಯ ಘಟಕಗಳನ್ನು ಸ್ಥಾಪಿಸಲು ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮಹಿಳೆಯರು ಮುಂದೆ ಬರಬೇಕು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮಹಿಳೆಯರಿಗೆ ವಸತಿ ಸೌಲಭ್ಯ ಕಲ್ಪಿಸಲು ಸ್ಥಳ ನೀಡುವಂತೆ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದೇನೆ. ಜಿಲ್ಲಾಧಿಕಾರಿಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು ಶೀಘ್ರದಲ್ಲೇ ನಿಗಮಕ್ಕೆ ಜಾಗ ದೊರಕಲಿದೆ ಎಂಬ ಭರವಸೆ ಇದೆ ಎಂದು ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶಶಿಕಲಾ ವಿ.ಟೆಂಗಳಿ ಹೇಳಿದರು.

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಯೋಜನೆಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಸತಿ ಸೌಲಭ್ಯಕ್ಕೆ ಮನವಿ:  
ನಿಗಮದ ವತಿಯಿಂದ ಪ್ರತಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ದಮನಿತರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಮನೆಗಳನ್ನು ಕಟ್ಟಿಕೊಳ್ಳಲು ಜಾಗ ನೀಡುವಂತೆ ಮನವಿ ಮಾಡಿದ್ದೇನೆ. ಶಿವಮೊಗ್ಗದ ಜಿಲ್ಲಾಧಿಕಾರಿಗಳು ಅತ್ಯಂತ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, 5 ಎಕರೆ ಜಾಗ ನೀಡಲು ಒಪ್ಪಿದ್ದಾರೆ. ನಗರದಲ್ಲಿ ಸುಮಾರು 300 ದಮನಿತ ಮಹಿಳೆಯರು ಮತ್ತು 600 ಅಂಗತ್ವ ಅಲ್ಪಸಂಖ್ಯಾತರಿದ್ದು, ಇವರು ಸ್ವಾವಲಂಬಿಗಳಾಗಿ ಮತ್ತು ಗೌರವಯುತವಾಗಿ ಜೀವಿಸಲು ಸರ್ಕಾರ ಅನೇಕ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ಲಿಂಗತ್ವ ಅಲ್ಪಸಂಖ್ಯಾತರು ಭಿಕ್ಷಾಟನೆ ಮಾಡದಂತೆ ಮನವಿ ಮಾಡುತ್ತೇನೆ ಎಂದರು.

ನಿಗಮದ ವಿವಿಧ ಯೋಜನೆಗಳಾದ ಉದ್ಯೋಗಿನಿ, ಕಿರುಸಾಲ, ಸಮೃದ್ದಿ, ಪ.ಜಾತಿ/ಪ.ಪಂ ಉಪಯೋಜನೆಗಳು, ಧನಶ್ರೀ, ಚೇತನ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳು ಒಳಗೊಂಡಂತೆ ದಮನಿತ/ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಗೆ ಅನುಕೂಲವಾಗುವಂತಹ ಇತರೆ ಯೋಜನೆಗಳನ್ನೂ ಅವರಿಗೆ ತಲುಪಿಸುವ ಕೆಲಸ ಅಧಿಕಾರಿಗಳು ಮಾಡಬೇಕು ಎಂದರು.
ಘಟಕ ಸ್ಥಾಪನೆಗೆ ಧನಸಹಾಯ:    
ರಾಯಚೂರು, ಹೊಸಪೇಟೆ ಜಿಲ್ಲೆಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಒಟ್ಟಾಗಿ ಉತ್ಪಾದಕ ಘಟಕಗಳನ್ನು ಸ್ಥಾಪಿಸಿ ನಡೆಸುತ್ತಿದ್ದಾರೆ. ಹೊಸಪೇಟೆಯಲ್ಲಿ ಸ್ಥಾಪಿಸಲಾಗಿರುವ ಶೇಂಗಾ ಚಕ್ಕಿ ಘಟಕ ಅತ್ಯಂತ ಯಶಸ್ವಿಯಾಗಿದೆ. ಇದೇ ರೀತಿ ನೀವು ಯಾವುದಾದರೂ ಘಟಕ ಸ್ಥಾಪಿಸಲು ಮುಂದಾದಲ್ಲಿ ನಿಗಮ ಆರ್ಥಿಕ ಸೌಲಭ್ಯ ನೀಡಲು ಸಿದ್ದವಾಗಿದೆ. ಹಾಗೂ ಘಟಕ ಸ್ಥಾಪನೆ ಬಗ್ಗೆ ತರಬೇತಿ ಸಹ ನಿಡಲಾಗುವುದು ಎಂದರು. 15 ರಿಂದ 20 ಜನ ಸಂಘಟಿತರಾಗಿ ಧೃಡ ಮನಸ್ಸು ಮಾಡಿ ಮುಂದೆ ಬಂದರೆ ತರಬೇತಿ ಜೊತೆಗೆ ಘಟಕ ಸ್ಥಾಪಿಸಲು ಸಹಕಾರ ನೀಡಲಾಗುವುದು ಎಂದರು.

ಪ್ರತಿ ಜಿಲ್ಲೆಗಳಲ್ಲಿ ನಿಗಮದ ವತಿಯಿಂದ ಒಂದೊಂದು ಸ್ವ ಸಹಾಯ ಘಟಕಗಳನ್ನು ಸ್ಥಾಪಿಸುವ ಉದ್ದೇಶ ಹೊಂದಿದ್ದು, ಇದನ್ನು ಸಾಕಾರಗೊಳಿಸಲು ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮಹಿಳೆಯರು, ಮಾಜಿ ದೇವದಾಸಿಯರು ಸಂಘಟಿತರಾಗಿ ಮುಂದೆ ಬರಬೇಕೆಂದರು.

ಆನ್‍ಲೈನ್ ಅರ್ಜಿ :
ನಿಗಮದ ವಿವಿಧ ಯೋಜನೆಗಳಡಿ ಸಾಲ ಪಡೆದಿರುವವರು ಸಾಲವನ್ನು ಸದುಪಯೋಗ ಮಾಡಿಕೊಳ್ಳುವುದರ ಜೊತೆಗೆ ಸಕಾಲದಲ್ಲಿ ಬ್ಯಾಂಕಿಗೆ ಸಾಲ ಮರು ಪಾವತಿ ಮಾಡಬೇಕು. ಆಗ ಬ್ಯಾಂಕ್‍ನವರು ಕೂಡ ಉತ್ತಮವಾಗಿ ಸಹಕರಿಸುತ್ತಾರೆ. ಕಿರುಸಾಲ ಪಡೆದು ಬಹುತೇಕ ಫಲಾನುಭವಿಗಳು ಸರಿಯಾಗಿ ಸಾಲ ಮರುಪಾವತಿ ಮಾಡಿರುತ್ತಾರೆ. ತಾಲ್ಲೂಕುಗಳ ಸಿಡಿಪಿಓ ಗಳು ಹೀಗೆ ಮರುಪಾವತಿ ಮಾಡಿದ ಮೇಲೆ ಮತ್ತೆ ಸಾಲದ ಅವಶ್ಯಕತೆ ಇದ್ದರೆ ಸಹಕರಿಸಬೇಕು. ಹಾಗೂ ಅವಶ್ಯಕತೆ ಇರುವವರಿಗೆ ಸಾಲ ದೊರಕಬೇಕೆಂಬ ಉದ್ದೇಶದಿಂದ ಮುಂದಿನ ದಿನಗಳಲ್ಲಿ ಆನ್‍ಲೈನ್ ಅರ್ಜಿ ಸಲ್ಲಿಕೆ ವ್ಯವಸ್ಥೆ ಮಾಡಲಾಗುವುದು ಎಂದರು.

ಲೀಡ್ ಬ್ಯಾಂಕ್ ಮ್ಯಾನೇಜರ್ ಅವರು ಸಹಕಾರವೂ ಇದ್ದು, ಶಾಸಕರಿಂದ ನಿಗದಿತ ಅವಧಿಯಲ್ಲಿ ಫಲಾನುಭವಿಗಳ ಆಯ್ಕೆಯ ಅನುಮೋದನೆ ಪಡೆದುಕೊಂಡು ಆಯಾ ಸಾಲಿನಲ್ಲೇ ಸೌಲಭ್ಯ ಸಿಗುವಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಹಿಳಾ ಅಭಿವೃದ್ದಿ ಇಲಾಖೆಯ ಕಾರ್ಯಕ್ರಮ ಅಧಿಕಾರಿ ಸಿ. ಸುರೇಶ್ ಮಾತನಾಡಿ, ಮಹಿಳಾ ಅಭಿವೃದ್ದಿ ನಿಗದಮ ವಿವಿಧ ಯೋಜನೆಗಳ ಕುರಿತು ಪ್ರಗತಿ ವರದಿ ಸಲ್ಲಿಸಿದರು. ತಾಲ್ಲೂಕುಗಳ ಸಿಡಿಪಿಓ ಗಳು ತಾಲ್ಲೂಕುಗಳ ಪ್ರಗತಿ ವರದಿ ಸಲ್ಲಿಸಿದರು.

ಲಿಂಗತ್ವ ಅಲ್ಪಸಂಖ್ಯಾತರೋರ್ವರು ಮಾತನಾಡಿ, ತಮ್ಮ ಸಮುದಾಯದಲ್ಲಿ ಕೆಲವರು ಒಟ್ಟಾಗಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇವೆ. ವೈಯಕ್ತಿಕವಾಗಿ ವಸತಿ ಸೌಲಭ್ಯ ಒದಗಿಸುವಂತೆ ಕಳೆದ 15 ವರ್ಷಗಳಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡುತ್ತಾ ಬಂದಿದ್ದೇವೆ. ಇದುವರೆಗೆ ಸೌಲಭ್ಯ ದೊರೆತಿಲ್ಲ. ಹಾಗೂ ನಮಗೆ ಸರ್ಕಾರಿ ಕಚೇರಿಗಳಲ್ಲಿ ಕೆಲಸ ನೀಡಬೇಕು. ಟ್ರಾನ್ಸಸ್ ಜೆಂಡರ್ಗಳಿಗೆ ಕಚೇರಿಗಳಲ್ಲಿ ಸಹಾಯಕರು ಅಥವಾ ಇತರೆ ಕೆಲಸಗಳನ್ನು ನೀಡಲು ಸರ್ಕಾರಿ ಕಚೇರಿಗಳ ಅಧಿಕಾರಿಗಳು ಆದ್ಯತೆ ನೀಡಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಅಧ್ಯಕ್ಷರು ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ದಮನಿತ ಮಹಿಳೆಯರಿಗೆ ಸಾಲ ಸೌಲಭ್ಯ ಪ್ರಮಾಣ ಪತ್ರ ವಿತರಿಸಿದರು.

ಜಿಲ್ಲಾ ಪಂಚಾಯತ್ ಸಿಇಓ ಎಂ.ಎಲ್. ವೈಶಾಲಿ, ಉಪ ಕಾರ್ಯದರ್ಶಿ ಜಯಲಕ್ಷ್ಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಸುರೇಶ್.ಜಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಯತೀಶ್ ಎಂ.ಡಿ ಸೇರಿದಂತೆ ವಿವಿಧ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share250Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹುಬ್ಬಳ್ಳಿ-ಧಾರವಾಡ: ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

Next Post

ಜುಲೈ 31ರವರೆಗೂ ಭಾರತಕ್ಕೆ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ಕೇಂದ್ರ ಸರ್ಕಾರ ಬ್ರೇಕ್

kalpa News

kalpa News

Next Post
ಜುಲೈ 31ರವರೆಗೂ ಭಾರತಕ್ಕೆ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ಕೇಂದ್ರ ಸರ್ಕಾರ ಬ್ರೇಕ್

ಜುಲೈ 31ರವರೆಗೂ ಭಾರತಕ್ಕೆ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ಕೇಂದ್ರ ಸರ್ಕಾರ ಬ್ರೇಕ್

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL