ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ ಅವರು ಇಂದು ಕೇಂದ್ರ ನಾಗರಿಕ ವಿಮಾನ ಖಾತೆಯ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಇವರನ್ನು ಭೇಟಿ ಮಾಡಿ, ದೇಶದ ಮಹಾನಗರಗಳಿಗೆ ಸಂಚರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಶಿವಮೊಗ್ಗ ವಿಮಾನ ನಿಲ್ದಾಣ ಸದ್ಯದಲ್ಲಿಯೇ ಲೋಕಾರ್ಪಣೆಗೊಳ್ಳಲಿದೆ. ಇದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ರಾಜ್ಯದ ಎರಡನೇ ಅತಿ ಉದ್ದವಿರುವ ರನ್‌ವೇ ಹೊಂದಿದ್ದು, ಶಿವಮೊಗ್ಗ ಜಿಲ್ಲೆ ಕರ್ನಾಟಕ ಭೂಪಟದ ಮಧ್ಯಭಾಗದಲ್ಲಿ ಇರುತ್ತದೆ. ಆದ್ದರಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆದಷ್ಟು ಬೇಗ ಎಲೆಕ್ಟ್ರಿಕಲ್ ಎಕ್ವಿಪ್‌ಮೆಂಟ್ ಫಂಡಿಂಗ್ (Electrical Equipment Funding) ಮತ್ತು RCS UDAN-4.2 ಯೋಜನೆ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆ ಹಾಗೂ ನೆರೆಯ ಜಿಲ್ಲೆಗಳ ಜನರಿಗೆ ದೇಶದ ಮಹಾನಗರಗಳಿಗೆ ಹೋಗಿಬರಲು ಮತ್ತು ವ್ಯಾಪಾರ ಹಾಗೂ ಪ್ರವಾಸೋದ್ಯಮ ಸಲುವಾಗಿ ಬರುವ ಪ್ರಯಾಣಿಕರನ್ನು ಉತ್ತೇಜನ ನೀಡುವ ಸಲುವಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಮೂಲಕ ದೇಶದ 11 ಪ್ರಮುಖ ನಗರಗಳ ವಿಮಾನ ನಿಲ್ದಾಣಕ್ಕೆ ಜೋಡಣೆ ಮಾಡುವ ಮಾರ್ಗಗಳಿಗೆ ಅನುಮತಿ ನೀಡುವಂತೆ ಕೋರಿದರು.
ಮಾರ್ಗಗಗಳು ಹೀಗಿವೆ:
ಮುಂಬೈ-ಶಿವಮೊಗ್ಗ-ಮುಂಬೈ
ಮುಂಬೈ-ಶಿವಮೊಗ್ಗ-ಮಂಗಳೂರು
ಮುಂಬೈ-ಶಿವಮೊಗ್ಗ-ಚೆನ್ನೈ
ಮುಂಬೈ-ಶಿವಮೊಗ್ಗ-ತಿರುಪತಿ
ಶಿವಮೊಗ್ಗ-ಗುಲ್ಬರ್ಗಾ-ಹೈದರಾಬಾದ್
ಶಿವಮೊಗ್ಗ-ಗುಲ್ಬರ್ಗಾ-ದೆಹಲಿ
ಬೆಂಗಳೂರು-ಶಿವಮೊಗ್ಗ-ಬೆಳಗಾವಿ
ಬೆಂಗಳೂರು-ಶಿವಮೊಗ್ಗ-ದೆಹಲಿ
ಕೊಚ್ಚಿ-ಶಿವಮೊಗ್ಗ-ದೆಹಲಿ
ಬೆಂಗಳೂರು-ಶಿವಮೊಗ್ಗ-ಗೋವಾ ಮತ್ತು
ಹೈದರಾಬಾದ್-ಶಿವಮೊಗ್ಗ-ಕೊಚ್ಚಿ
ಮಾರ್ಗಗಳನ್ನು ಕೂಡಲೇ ಟೆಂಡರ್ ಕರೆಯುವ ಮೂಲಕ ವಿಮಾನ ಸಂಚರಿಸಲು ಅಗತ್ಯ ಕ್ರಮಗಳನ್ನು ಕೂಡಲೇ ಕೈಗೊಳ್ಳಲು ಕೇಂದ್ರ ಮಂತ್ರಿಗಳಿಗೆ ಮನವಿ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post