ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೇಕಪ್ ತರಬೇತಿಯಿಂದ ಯುವತಿಯರು ಮತ್ತು ಮಹಿಳೆಯರು ಸ್ವ-ಉದ್ಯೋಗ ಸೃಷ್ಠಿಸಿಕೊಳ್ಳಬಹುದು ಎಂದು ನಟ ಧನಂಜಯ (ಡಾಲಿ) Actor Dhananjaya (Daali) ಹೇಳಿದರು.
ಅವರು “ಅಶ್ವಿನೀಸ್ ಮೇಕೋವರ್ ಸ್ಟುಡಿಯೋ ಶಿವಮೊಗ್ಗ” ಸಂಸ್ಥೆಗೆ ಭೇಟಿ ನೀಡಿದಾಗ ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ ಅಶ್ವಿನೀಸ್ ಮೇಕೋವರ್ ಸಂಸ್ಥೆಯಿಂದ ರಿಯಾಯಿತಿ ದರದಲ್ಲಿ ಮೇಕಪ್ ತರಬೇತಿಯನ್ನು ನೀಡುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.
ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರಗಳಲ್ಲೂ ಸಮರ್ಥವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮಹಿಳೆ ಅಬಲೆಯಲ್ಲ ಸಬಲೆ. ಎಲ್ಲಾ ರಂಗಗಳಲ್ಲಿ ಕೆಲಸ ಮಾಡಬಲ್ಲೆ ಎನ್ನುವುದನ್ನು ಹಲವಾರು ಮಹಿಳೆಯರು ಸಾಧಿಸಿ ತೋರಿಸಿದ್ದಾರೆ. ಹಾಗಾಗಿ ಮಹಿಳೆಯರು ಕೇವಲ ಮನೆಗೆಲಸಗಳಿಗೆ ಮಾತ್ರ ಸೀಮಿತವಾಗದೇ ಎಲ್ಲ ರಂಗಗಳಲ್ಲಿಯೂ ತೊಡಗಿಸಿಕೊಂಡಿರುವುದು ಸಂತಸವೆನಿಸುತ್ತದೆ ಎಂದರು.
ಸಂಸ್ಥೆಯ ಮುಖ್ಯಸ್ಥರಾದ “ಅಶ್ವಿನಿ ಎಸ್ ಎಂ ಮಾತನಾಡಿ, ದೀಪಾವಳಿ ಹಬ್ಬದ ಪ್ರಯುಕ್ತ ಶಿವಮೊಗ್ಗ ನಗರದ ಪ್ರಖ್ಯಾತ ಮೇಕಪ್ ಕಲಿಕಾ ತರಬೇತಿ ಸಂಸ್ಥೆಯಾದ “ಅಶ್ವಿನೀಸ್ ಮೇಕೋವರ್ ಸ್ಟುಡಿಯೋ ಶಿವಮೊಗ್ಗ” ಸಂಸ್ಥೆಯ ವತಿಯಿಂದ ರಿಯಾಯಿತಿ ದರದಲ್ಲಿ ಮೇಕಪ್ ಕಲಿಯಲು ಶಿಬಿರವನ್ನು ಏರ್ಪಡಿಸುತ್ತಿದೆ. ಮೇಕಪ್ ಕೊರ್ಸ್ ಗೆ ಸೇರಬಯಸುವ ಯುವತಿಯರು ಮತ್ತು ಮಹಿಳಾ ವಿದ್ಯಾರ್ಥಿಗಳಿಗೆ ಅತಿ ಕಡಿಮೆ ದರದಲ್ಲಿ ಅತ್ಯುನ್ನತ ಗುಣಮಟ್ಟದ ಮೇಕಪ್ ತರಬೇತಿಯನ್ನು ಶಿವಮೊಗ್ಗ ಸಿಟಿಯಲ್ಲೆ ಹೇಳಿಕೊಡಲಾಗುವುದು ಅಲ್ಲದೆ ವಿದ್ಯಾರ್ಥಿಗಳಿಗೆ ಮೇಕಪ್ ಕೋರ್ಸ್‌ನ ಸಿಲೆಬಸ್ ಪ್ರಿಂಟ್ ಬುಕ್ , ಮೇಕಪ್ ಕಲಿಕೆಗೆ ಅಗತ್ಯವಾಗಿ ಬೇಕಾದ ಅಭ್ಯಾಸದ ಉಪಕರಣ ಮತ್ತು ಸೌಂದರ್ಯ ವರ್ಧಕ ವಸ್ತುವನ್ನು ಸಹ ಸಂಸ್ಥೆಯೇ ನೀಡುತ್ತದೆ ಎಂದರು.
ಸಂಸ್ಥೆ ಆಯೋಜನೆ ಮಾಡುವ ಬೃಹತ್ ಸಮಾರೋಪ ವೇದಿಕೆಯಲ್ಲಿ, ಸ್ವತಃ ವಿದ್ಯಾರ್ಥಿಗಳಿಂದಲೆ ಸೆಲೆಬ್ರಿಟಿಗಳಿಗೆ ಅಥವಾ ಇತರರಿಗೆ ಮೇಕಪ್ ಮಾಡಲು ಅವಕಾಶ ಒದಗಿಸಿ, ಸರ್ಟಿಫಿಕೇಟ್ ಸಹ ನೀಡಿ ಗೌರವಿಸಲಾಗುವುದು. ಮೇಕಪ್ ಕಲಿಯಲು ತಾಲ್ಲೂಕು, ರಾಜ್ಯಗಳಿಂದ ಕೂಡ ವಿದ್ಯಾರ್ಥಿಗಳು ಭಾಗವಹಿಸಬಹುದು. ಈ ಕೋರ್ಸ್ ನ ಸಹಾಯದಿಂದ ಪ್ರತಿಯೊಬ್ಬ ಮಹಿಳೆಯರು ಮತ್ತು ಯುವತಿಯರು ಸ್ವ- ಉದ್ಯೋಗ ಸೃಷ್ಟಿಸಿಕೊಳ್ಳುವ ಅವಕಾಶ ಹೊಂದಬಹುದಾಗಿದೆ ಎಂದರು.
ಮೇಕಪ್ ತರಬೇತಿಗೆ ಸೇರುವ ಆಸಕ್ತರು ನ.7ಸೋಮವಾರದಿಂದ ಹೊಸ ಬ್ಯಾಚ್ ತರಗತಿ ಪ್ರಾರಂಭವಾಗುವುದು. ಮೊದಲು ಹೆಸರು ನೊಂದಾಯಿಸಿದವರಿಗೆ ಮಾತ್ರ ಮೊದಲ ಆದ್ಯತೆ ಇದ್ದು, ಹೆಚ್ಚಿನ ಮಾಹಿತಿಗಾಗಿ : 99012 – 16093ಗೆ ಸಂಪರ್ಕಿಸಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post