ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದೇವಾಲಯಗಳು ಸೇರಿದಂತೆ ಕ್ಷೇತ್ರ ಸಮಗ್ರವಾಗಿ ಅಭಿವೃದ್ಧಿಗೊಳಿಸಿ, ಹಿಂದುತ್ವವನ್ನು ಮೈಗೂಡಿಸಿಕೊಂಡ ಕೆ.ಎಸ್. ಈಶ್ವರಪ್ಪನವರಿಗೇ ಈ ಬಾರಿ ಶಿವಮೊಗ್ಗ ನಗರ ಕ್ಷೇತ್ರದಿಂದ ಟಿಕೇಟ್ ನೀಡಬೇಕು ಎಂದು ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ವೆಂಕಟೇಶ ರಾವ್ ಒತ್ತಾಯಿಸಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಈಶ್ವರಪ್ಪನವರ ಅಭಿಮಾನಿಗಳ ಬಳಗದ ಮನವಿಯೇ ಹೊರತು ಬ್ರಾಹ್ಮಣ ಸಮಾಜದ್ದಲ್ಲ ಎಂದು ಸ್ಪಷ್ಟಪಡಿಸಿದ ಅವರು, ಒಂದು ವೇಳೆ ಬ್ರಾಹ್ಮಣ ಅಭ್ಯರ್ಥಿಯನ್ನು ಬಿಜೆಪಿ ಘೋಷಣೆ ಮಾಡಿದರೆ ಅದಕ್ಕೆ ನಮ್ಮ ಸಂಘ ಬೆಂಬಲಿಸಲಿದೆ ಎಂದಿದ್ದಾರೆ.
ಇನ್ನು, ಜಿಲ್ಲೆ ಹಾಗೂ ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಈಶ್ವರಪ್ಪ ಇಬ್ಬರೂ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ದೇವಾಲಯ ಹಾಗೂ ಮಠಗಳ ಅಭಿವೃದ್ಧಿಗೆ ಈಶ್ವರಪ್ಪ ಅವರ ಕೊಡುಗೆಯಿದೆ. ಅಭಿವೃದ್ಧಿಯ ಹರಿಕಾರರಾಗಿರುವ ಅವರು ಹಿಂದುತ್ವವನ್ನು ಮೈಗೂಡಿಸಿಕೊಂಡವರು. ಒಬ್ಬ ಒಬಿಸಿ ನಾಯಕ ಇಂದು ರಾಜ್ಯ ನಾಯಕರಾಗಿ ಬೆಳೆದಿದ್ದಾರೆ. ಇಂತಹ ನಾಯಕರಿಗೆ ಬಿಜೆಪಿ ಟಿಕೇಟ್ ನೀಡಬೇಕು. ಒಂದು ವೇಳೆ ಈಶ್ವರಪ್ಪನವರಿಗೆ ಅಲ್ಲದಿದ್ದರೆ ಅವರ ಪುತ್ರ ಕಾಂತೇಶ್ ಅವರಿಗೆ ಟಿಕೇಟ್ ನೀಡಬೇಕು ಎಂದು ಮನವಿ ಮಾಡಿದರು.
Also read: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಬಿಜೆಪಿಗೆ ಸೇರ್ಪಡೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post