ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಕಿಚ್ಚು ಇಡೀ ರಾಜ್ಯಕ್ಕೆ ವ್ಯಾಪಿಸುತ್ತಿರುವಂತೆಯೇ ಕಾಲೇಜುಗಳಿಗೆ ಬುರ್ಖಾ ಹಾಗೂ ಹಿಜಾಬ್ ಧರಿಸಿ ಬರಲು ಅನುಮತಿ ನೀಡಬೇಕೆಂದು ಒತ್ತಾಯಿಸಿ ನೂರಾರು ಮುಸ್ಲಿಂ ಮಹಿಳೆಯರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವು ಕಡೆಗಳಲ್ಲಿ ಕಾಲೇಜುಗಳಲ್ಲಿ ಬುರ್ಖಾ ಹಾಗೂ ಹಿಜಾಬ್ ಧರಿಸಿ ಬರುವುದಕ್ಕೆ ನಿಷೇಧ ಹೇರಲಾಗಿದೆ. ರಾಜ್ಯ ಸರ್ಕಾರವು ಸಹ ಇದೇರೀತಿಯ ಆದೇಶವನ್ನು ಹೊರಡಿಸಿದೆ. ಇದು ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣ ಹಾಗೂ ಪೋಷಕರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಆದೇಶದಲ್ಲಿ ಮಾರ್ಪಾಟು ಮಾಡಿ ಬುರ್ಖಾ ಹಾಗೂ ಹಿಜಾಬ್ ಧರಿಸಿಕೊಂಡು ಬರಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post