ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಅಕ್ಕಪಕ್ಕದ ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಹೊರಡಿಸಲಾಗಿರುವ ಮಾರ್ಗಸೂಚಿಯಲ್ಲಿ ತಿದ್ದುಪಡಿ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಈ ರಿಪೋರ್ಟ್‌ಗಳು ಕಡ್ಡಾಯ:
ತಿದ್ದುಪಡಿ ಮಾರ್ಗಸೂಚಿಯಂತೆ ಹೊರಜಿಲ್ಲೆಗಳಿಂದ ಆಗಮಿಸುವ ಪ್ರವಾಸಿಗರಿಗೆ ಕೆಲವೊಂದು ರಿಪೋರ್ಟ್ ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ.
ಜಿಲ್ಲಾ ವ್ಯಾಪ್ತಿಯ ಎಲ್ಲಾ ಲಾಡ್ಜ್, ಹೋಟೆಲ್, ಹೋಂ ಸ್ಟೇ/ಅರಣ್ಯ ಇಲಾಖೆ ವಸತಿ ಗೃಹಗಳಲ್ಲಿ ತಂಗಲಿರುವವರು ಬುಕಿಂಗ್ ಸಮಯದಲ್ಲಿ ಸದರಿ ಪ್ರವಾಸಿಗರು ಚೆಕ್‌ಇನ್ ದಿನದಿಂದ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್’ಟಿಪಿಸಿಆರ್ ನೆಗೆಟಿವ್ ವರದಿ/ಆರ್‌ಎಟಿ ನೆಗೆಟಿವ್ ವರದಿ/ಕೋವಿಡ್ 2ನೆಯ ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿರಬೇಕಾದ್ದನ್ನು ಕಡ್ಡಾಯಗೊಳಿಸಲಾಗಿದೆ.
ಈ ಕುರಿತಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು, ಆದೇಶಿಸಿದ್ದು, ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು ಹಾಗೂ ಇನ್ನಿತರ ಪ್ರೇಕ್ಷಣೀಯ ಸ್ಥಳಗಳಾದ ಜೋಗ್ ಜಲಪಾತ, ಆಗುಂಬೆಯ ಸೂರ್ಯಾಸ್ಥ ವೀಕ್ಷಣೆಯ ಸ್ಥಳ, ಗಾಜನೂರು ಡ್ಯಾಂ, ಬಿಆರ್’ಪಿ ಡ್ಯಾಂ, ಹುಲಿ ಮತ್ತು ಸಿಂಹಧಾಮ, ಸಕ್ರೆಬೈಲು ಆನೆ ಬಿಡಾರ ಮತ್ತು ಪ್ರವಾಸೋದ್ಯಮ, ಅರಣ್ಯ ಇಲಾಖೆ, ಪ್ರಾಚ್ಯ ವಸ್ತು ಮತ್ತು ಪುರಾತತ್ವ ಇಲಾಖೆಗಳ ಪ್ರವಾಸಿ ತಾಣಗಳು ಮತ್ತು ಇತ್ಯಾದಿ ಪ್ರೇಕ್ಷಣೀಯ ಸ್ಥಳಗಳಿಗೆ ಆಗಮಿಸುವ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಹಿಂದಿನ ೭೨ ಗಂಟೆಗಳ ಒಳಗಾಗಿ ಮಾಡಿಸಿದ ಆರ್’ಟಿಪಿಸಿಆರ್ ನೆಗೆಟಿವ್ ವರದಿ/ಆರ್’ಎಟಿ ನೆಗೆಟಿವ್ ವರದಿ/ಕೋವಿಡ್ ೨ನೆಯ ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿರಬೇಕಾದ್ದನ್ನು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post